ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ಬೆಂಗಳೂರಿಗೆ ಬಂದ ತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಇಂದು(ಮೇ.29) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ವಾರೆಂಟ್ ಜಾರಿಯಲ್ಲಿರುವುದರಿಂದ ಅವರನ್ನು ಬಂಧಿಸಲು ಎಸ್ ಐಟಿ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಆತನನ್ನು ಬಂಧಿಸಿ ವಿಚಾರಣೆ ನಡೆಸಲಿದೆ ಎಂದರು.
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಜರ್ಮನಿಂದ ಬೆಂಗಳೂರಿಗೆ ವಾಪಸ್ ಮೇ.30 ರಂದು ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ಹಿಂತಿರುಗಲು ವಿಮಾನ ಟಿಕೆಟ್ ಕಾಯ್ದಿರಿಸಿದ್ದಾರೆ. ಮೇ. 31 ರ ಮಧ್ಯರಾತ್ರಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ನಿರೀಕ್ಷೆಯಿದೆ.