Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಬೆಂಗಳೂರಿನಲ್ಲಿ ಪಾಕ್‌ ಪ್ರಜೆಗಳ ಬಂಧನ: ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ

ಬೆಂಗಳೂರು: ಪಾಕಿಸ್ತಾನ ಪ್ರಜೆ ಅಲ್ಲದೆ ವಿದೇಶದವರು ಬೆಂಗಳೂರಿಗೆ ಬಂದು ಪಾಸ್‌ಪೋರ್ಟ್‌ ಮಾಡಿಕೊಳ್ಳುತ್ತಿದ್ದಾರೆ ಎಂದರೆ ರಾಜ್ಯದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲತೆವಾಗಿದೆ ಎಂದರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಪಾಕ್‌ ಪ್ರಜೆಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಮೂಲದ ಪ್ರಜೆಗಳು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಂಬ ಮಾಹಿತಿ ದೊರೆತ ತಕ್ಷಣವೇ ನಮ್ಮ ಪೊಲೀಸರು ಪಾಕ್‌ ಪ್ರಜೆಗಳನ್ನು ಬಂಧಿಸಿದ್ದಾರೆ. ನಮ್ಮ ರಾಜ್ಯ ಪೊಲೀಸರು ಸಮರ್ಥರಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಇನ್ನುಳಿದಿರುವ ಪಾಕ್‌ ಪ್ರಜೆಗಳನ್ನು ಪತ್ತೆ ಹಚ್ಚಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ವಿಷಯವಾಗಿ ಮಾತನಾಡಿದ ಪರಮೇಶ್ವರ್‌ ಅವರು, ಸತೀಶ್‌ ಅವರ ಪುತ್ರಿ ಈಗ ‌ಸಂಸದೆಯಾಗಿದ್ದಾರೆ. ಹೀಗಾಗಿ ಪುತ್ರಿಗೆ ತಂಗಲು ಕ್ವಾರ್ಟರ್ಸ್‌ ಬೇಕು ಎಂಬ ಕಾರಣಕ್ಕೆ ದೆಹಲಿಗೆ ಹೋಗಿದ್ದರು ಅಷ್ಟೇ. ಆ ವೇಳೆ ಪಕ್ಷದ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಅದರಲ್ಲಿ ಏನು ತಪ್ಪಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Tags: