ಬೆಂಗಳೂರು: ಪಾಕಿಸ್ತಾನ ಪ್ರಜೆ ಅಲ್ಲದೆ ವಿದೇಶದವರು ಬೆಂಗಳೂರಿಗೆ ಬಂದು ಪಾಸ್‌ಪೋರ್ಟ್ ಮಾಡಿಕೊಳ್ಳುತ್ತಿದ್ದಾರೆ ಎಂದರೆ ರಾಜ್ಯದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲತೆವಾಗಿದೆ ಎಂದರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಮೂಲದ ಪ್ರಜೆಗಳು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಂಬ ಮಾಹಿತಿ ದೊರೆತ ತಕ್ಷಣವೇ ನಮ್ಮ ಪೊಲೀಸರು ಪಾಕ್ ಪ್ರಜೆಗಳನ್ನು ಬಂಧಿಸಿದ್ದಾರೆ. ನಮ್ಮ ರಾಜ್ಯ ಪೊಲೀಸರು ಸಮರ್ಥರಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಇನ್ನುಳಿದಿರುವ ಪಾಕ್ ಪ್ರಜೆಗಳನ್ನು ಪತ್ತೆ ಹಚ್ಚಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ವಿಷಯವಾಗಿ ಮಾತನಾಡಿದ ಪರಮೇಶ್ವರ್ ಅವರು, ಸತೀಶ್ ಅವರ ಪುತ್ರಿ ಈಗ ಸಂಸದೆಯಾಗಿದ್ದಾರೆ. ಹೀಗಾಗಿ ಪುತ್ರಿಗೆ ತಂಗಲು ಕ್ವಾರ್ಟರ್ಸ್ ಬೇಕು ಎಂಬ ಕಾರಣಕ್ಕೆ ದೆಹಲಿಗೆ ಹೋಗಿದ್ದರು ಅಷ್ಟೇ. ಆ ವೇಳೆ ಪಕ್ಷದ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಅದರಲ್ಲಿ ಏನು ತಪ್ಪಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…