ರಾಜ್ಯ

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ ಎಂದು ಖ್ಯಾತ ವಿಮರ್ಶಕ, ಲೇಖಕ ಡಾ.ಓ ಎಲ್ ನಾಗಭೂಷಣ ಸ್ವಾಮಿ ಹೇಳಿದರು.

ಅವರು ಇಂದು(ಮಾರ್ಚ್.‌13) ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಯೋಗದೊಂದಿಗೆ ಜ್ಞಾನಭಾರತಿಯಲ್ಲಿರುವ ಜಿ ಎಸ್ ಎಸ್ ಸಭಾಂಗಣದಲ್ಲಿ ರಾಷ್ಟ್ರಕವಿ ಡಾ.ಜಿ ಎಸ್ ಶಿವರುದ್ರಪ್ಪ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ಅಂಗಳದಲ್ಲಿ ತಿಂಗಳ ಪುಸ್ತಕ ಕಾರ್ಯಕ್ರಮದಲ್ಲಿ ಜಿ ಎಸ್ ಶಿವರುದ್ರಪ್ಪ ಅವರ ಕಾವ್ಯಾರ್ಥ ಚಿಂತನ ಕೃತಿಯನ್ನು ಕುರಿತು ಮಾತನಾಡಿದರು.

ಕಾವ್ಯ ಮೀಮಾಂಸೆ ಹಾಗೂ ವಿಮರ್ಶೆಯ ಪರಿಭಾಷೆ ಕಾಲದಿಂದ ಕಾಲಕ್ಕೆ ಬದಲಾಗುತ್ತದೆ. ನಾವು ಇಂದಿಗೂ ಪಾಶ್ಚಾತ್ಯ ವಿಮರ್ಶೆಯ ಮಾದರಿಗಳನ್ನು ಇಟ್ಟುಕೊಂಡೆ ಸಾಹಿತ್ಯ ಕೃತಿಯೊಂದರ ತೌಲಾನಿಕ ಅಧ್ಯಯನ ಮಾಡುತ್ತೇವೆ. ಆದರೆ ಆಧುನಿಕ ಕಾಲಘಟ್ಟದಲ್ಲಿ ಇಂದಿನ ಮಾದರಿಗಳು ಬೇರೆಯದೆ ಆಗಿದೆ ಎಂದು ಅವರು ತಿಳಿಸಿದರು.

ಕನ್ನಡ ಸಾಹಿತ್ಯದಲ್ಲಿ ವಿಮರ್ಶೆಯ ಮಾದರಿಯನ್ನು ಹಾಕಿಕೊಟ್ಟದ್ದು ಕುವೆಂಪು ಅವರು, ಕುವೆಂಪು ವಿಮರ್ಶೆಯ ಪರಿಭಾಷೆ ಸಿದ್ಧಾಂತ ಪರಿಕಲ್ಪನೆಗಳ ಬಗ್ಗೆ ಒಂದು ಸಿದ್ದ ಮಾದರಿಯನ್ನು ತೋರಿಸಿಕೊಟ್ಟರು ಆದರೆ ಅವು ಪಾಶ್ಚಾತ್ಯ ವಿಮರ್ಶೆಯ ದಟ್ಟ ಪ್ರಭಾವದಲ್ಲಿದ್ದವು, ಆ ದಾರಿಯಲ್ಲಿ ಮುಂದುವರೆದು ಕನ್ನಡದ ವಿಮರ್ಶೆಯೇ ಮತ್ತು ಪೌರಾಣಿಕತೆ ಹೇಗಿರಬೇಕು ಎಂದು ತೋರಿಸಿಕೊಟ್ಟವರು ಜಿ ಎಸ್ ಶಿವರುದ್ರಪ್ಪ ಅವರು, ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ತೌಲಾನಿಕ ಅಧ್ಯಯನದ ಒಂದು ವಿಭಾಗವನ್ನೇ ಆರಂಭಿಸಿದರು ಅದರ ಸಂಪೂರ್ಣ ಶ್ರೇಯ ಜಿಎಸ್ಎಸ್ ಅವರಿಗೆ ಸಲ್ಲುತ್ತದೆ ಎಂದು ಓಎಲ್ ನಾಗಭೂಷಣ ಸ್ವಾಮಿ ಹೇಳಿದರು.

ಕಾವ್ಯಮೀಮಾಂಸೆ ಯಾಕೆ ಓದಬೇಕು ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರೂ ಹಾಕಿಕೊಳ್ಳಬೇಕು ಬರೆಯುವವರು ಅದಕ್ಕೆ ತಮಗೆ ತಾವೇ ಉತ್ತರವನ್ನು ಕಂಡುಕೊಳ್ಳಬೇಕು ಆಗ ಮಾತ್ರ ಅವರ ಸಾಹಿತ್ಯ ವಿಮರ್ಶೆಯ ಪರಿಭಾಷೆಯ ಒಳಗೆ ಗಟ್ಟಿಯಾಗಿ ನಿಲ್ಲುತ್ತದೆ ಎಂದು ಅವರು ತಿಳಿಸಿದರು. ಒಂದು ಸಾಹಿತ್ಯ ಕೃತಿಯ ಅರ್ಥ ನಿರ್ಣಯಿಸುವವರು ಯಾರು ಓದುಗರೆ, ವಿಮರ್ಶಕರೇ , ಅಥವಾ ಬರಹಗಾರನೇ ಎಂಬ ಪ್ರಶ್ನೆ ಅಂದಿಗೂ ಇತ್ತು, ಇಂದಿಗೂ ಇದೆ, ಮುಂದೆಯೂ ಇರುತ್ತದೆ ಎಂದು ಅವರು ತಿಳಿಸಿದರು.

ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ಮಾನಸ ಅವರು ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪ ಅವರ ಸಾಹಿತ್ಯದ ಸಾಧನೆ ಬಣ್ಣಿಸುವುದು ಅತ್ಯಂತ ಕಷ್ಟದ ಕೆಲಸ. ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಪ್ರಾಧಿಕಾರ ಈ ಕಾರ್ಯಕ್ರಮ ಆಯೋಜಿಸಿದೆ, ವಿದ್ಯಾರ್ಥಿಗಳು ಪ್ರಾಧಿಕಾರದ ಎಲ್ಲಾ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಸಾಹಿತ್ಯ ಜೀವನ ವಿಧಾನವನ್ನು ರೂಪಿಸುತ್ತದೆ ಬದುಕುವುದನ್ನು ಕಲಿಸುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಸಾಹಿತ್ಯದ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ.ಎಚ್.ಶಶಿಕಲಾ ಮಾತನಾಡಿ, ಸಾಹಿತ್ಯ ವಿಮರ್ಶೆ ಒಂದು ಸಾಹಿತ್ಯ ಕೃತಿಯನ್ನು ಅರ್ಥಮಾಡಿಕೊಳ್ಳಲು ಅತ್ಯಂತ ಅವಶ್ಯಕವಿದೆ, ಸಾಹಿತ್ಯ ಗಟ್ಟಿಯಾಗಲು ಹಾಗೂ ಉತ್ತಮ ಕೃತಿಗಳ ಪರ ಬರಬೇಕಾದರೆ ಅವುಗಳನ್ನು ವಿಮರ್ಶಕರು ಓರೆ ಹಚ್ಚಿ ನೋಡಬೇಕಾದ ಅವಶ್ಯಕತೆ ಇದೆ ಎಂದರು.

ಸಮಾರಂಭದಲ್ಲಿ ಪ್ರಾಧಿಕಾರದ ಆಡಳಿತ ಅಧಿಕಾರಿ ಕೆ.ಬಿ.ಕಿರಣ್ ಸಿಂಗ್ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಡೊಮಿನಿಕ್ ಡಾ.ಮುನಿಯಪ್ಪ ಹಾಗೂ ಡಾ. ವಡ್ಡೆ ಹೇಮಲತಾ ಅವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

2 hours ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

2 hours ago

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…

2 hours ago

ಜಾ.ದಳ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಮುಖಂಡರ ಪೈಪೋಟಿ

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…

2 hours ago

ಎಲ್ಲೆಂದರಲ್ಲಿ ಕಸ ಸುರಿದರೆ ಬೀಳಲಿದೆ ದಂಡ!

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…

2 hours ago

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

3 hours ago