Mysore
25
broken clouds

Social Media

ಬುಧವಾರ, 09 ಏಪ್ರಿಲ 2025
Light
Dark

ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದು ಕ್ಷಮೆಯಾಚಿಸಿದ ಅರವಿಂದ್‌ ಬೆಲ್ಲದ್‌

ಬೆಂಗಳೂರು: ಜಿಂದಾಲ್‌ ಅವರಿಗೆ ಸರ್ಕಾರದ ವತಿಯಿಂದ ಭೂಮಿ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್‌ ಬೆಲ್ಲದ್‌ ಅವರು ಈಗ ಸಿದ್ದರಾಮಯ್ಯಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಸಿಎಂಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್‌ ಬೆಲ್ಲದ್‌ ಕ್ಷಮೆ ಕೇಳಿದ್ದಾರೆ.

ಧಾರವಾಡದಲ್ಲಿ ಮಾತಮಾಡಿದ ಅರವಿಂದ್‌ ಬೆಲ್ಲದ್‌, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಅರವಿಂದ್‌ ಬೆಲ್ಲದ್‌ ಅವರು ಪತ್ರ ಬರೆದು ಕ್ಷಮೆ ಕೇಳಿದ್ದಾರೆ.

ನಾನು ಬಳಸಿದ ಪದ ನನಗೆ ಶೋಭೆ ತರುವುದಿಲ್ಲ. ಈ ಹಿನ್ನೆಲೆಯಲ್ಲಿ ನಾನು ಸಿಎಂ ಸಿದ್ದರಾಮಯ್ಯರ ಬಳಿ ಕ್ಷಮೆ ಹೇಳುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಜಿಂದಾಲ್‌ಗೆ ಭೂಮಿ ಕೊಟ್ಟಿದ್ದಾರೆ. ಮಾರುಕಟ್ಟೆ ಮೌಲ್ಯದ ಒಂದು ಭಾಗಕ್ಕೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ಇನ್ನೊಂದು ಹಗರಣವನ್ನು ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಬೆಲ್ಲದ್‌ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು.

Tags: