ಬೆಂಗಳೂರು: ಜಿಂದಾಲ್ ಅವರಿಗೆ ಸರ್ಕಾರದ ವತಿಯಿಂದ ಭೂಮಿ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಅವರು ಈಗ ಸಿದ್ದರಾಮಯ್ಯಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಸಿಎಂಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಕ್ಷಮೆ ಕೇಳಿದ್ದಾರೆ.
ಧಾರವಾಡದಲ್ಲಿ ಮಾತಮಾಡಿದ ಅರವಿಂದ್ ಬೆಲ್ಲದ್, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಅರವಿಂದ್ ಬೆಲ್ಲದ್ ಅವರು ಪತ್ರ ಬರೆದು ಕ್ಷಮೆ ಕೇಳಿದ್ದಾರೆ.
ನಾನು ಬಳಸಿದ ಪದ ನನಗೆ ಶೋಭೆ ತರುವುದಿಲ್ಲ. ಈ ಹಿನ್ನೆಲೆಯಲ್ಲಿ ನಾನು ಸಿಎಂ ಸಿದ್ದರಾಮಯ್ಯರ ಬಳಿ ಕ್ಷಮೆ ಹೇಳುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಜಿಂದಾಲ್‌ಗೆ ಭೂಮಿ ಕೊಟ್ಟಿದ್ದಾರೆ. ಮಾರುಕಟ್ಟೆ ಮೌಲ್ಯದ ಒಂದು ಭಾಗಕ್ಕೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ಇನ್ನೊಂದು ಹಗರಣವನ್ನು ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಬೆಲ್ಲದ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…