ಬೆಂಗಳೂರು : ಅರವಿಂದ ಕೇಜ್ರಿವಾಲ್ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್ ನೀಡಲಾಗುತ್ತಿದೆ. ಟಿಕೆಟ್ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್‌ನವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್ ಅವರು ಮರಳಿ ಜೈಲಿಗೆ ಹೋಗಬೇಕಿದೆ. ಅವರು ಮತ್ತೆ ಬಿಡುಗಡೆಯಾಗುವುದಿಲ್ಲ ಎಂದರು.
ಅವರು ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದರು.
ವಿಧಾನಪರಿಷತ್ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕೇಂದ್ರದ ನಾಯಕರು ನಿರ್ಧಾರ ಮಾಡಿದ್ದಾರೆ. ಇದರಲ್ಲಿ ರಾಜ್ಯದ ನಾಯಕರ ಪಾತ್ರವಿಲ್ಲ ಎಂದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದರು.
ಎಸ್.ಎಂ.ಕೃಷ್ಣ ಆರೋಗ್ಯ ವಿಚಾರಿಸಿದ ಆರ್.ಅಶೋಕ : ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ ವಿಚಾರಿಸಿದರು.
ಈ ವೇಳೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ನಮ್ಮ ನಾಡಿನ ಮುತ್ಸದ್ಧಿಯಾಗಿದ್ದು, ದೇವರ ಆಶೀರ್ವಾದ ಇದೆ. ನಾವು ಕೂಡ ಅವರ ಆರೋಗ್ಯಕ್ಕೆ ಪ್ರಾರ್ಥಿಸುತ್ತೇವೆ ಎಂದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…