Mysore
27
few clouds

Social Media

ಸೋಮವಾರ, 23 ಫೆಬ್ರವರಿ 2026
Light
Dark

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

DK Shivakumar

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು ಭಾಷಣ ಮಾಡಿ ಹೋಗುವ ಕೆಲಸ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಡಬ್ಲ್ಯೂ ಸಭೆಗೆ ನನ್ನನ್ನು ಕರೆದಿಲ್ಲ. ಸಿಎಂ ಹೋಗುತ್ತಿದ್ದಾರೆ. ನನ್ನನ್ನು ಕರೆದಿಲ್ಲ. ಕರೆದರೆ ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಜೊತೆ ಬೇರೆ ವಿಚಾರ ಚರ್ಚೆ ಮಾಡಿಲ್ಲ. ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದು ನಾನು, ಸಿಎಂ ಹೇಳಿದ್ದೇವೆ ಎಂದು ಹೇಳಿದರು.

ಯಾವ ಪೋಸ್ಟ್‌ ಇದ್ದರೂ ನಾನು ಪಕ್ಷದ ಕಾರ್ಯಕರ್ತನೇ. ನಾವು ಲೈಫ್‌ ಟೈಮ್‌ ವರ್ಕರ್‌, ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ. ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್‌ ಮೇಲೆ ಕುಳಿತು ಭಾಷಣ ಮಾಡಿ ಹೋಗಲ್ಲ ಎಂದು ಹೇಳಿದರು.

Tags:
error: Content is protected !!