ರಾಜ್ಯ

ಕೊಟ್ಟ ಮಾತಿನಂತೆ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಇಂದು ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌, ಈ ಸಾಲಿನ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ 1 ಸಾವಿರ ರೂ. ಹೆಚ್ಚಿಸಲಾಗಿದ್ದು, ಇದರಿಂದ ವರ್ಷಕ್ಕೆ ಇಲಾಖೆಗೆ 144 ಕೋಟಿ ರೂ. ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಸಚಿವೆ, 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಅಗಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ರೂ.ಗಳ ಗೌರವ ಧನ ಹೆಚ್ಚಳ ಮಾಡಿದ್ದರು. ಆದರೆ, ಬಿಜೆಪಿ ಸರ್ಕಾರ ತಮ್ಮ 4 ವರ್ಷದ ಅವಧಿಯಲ್ಲಿ ಒಂದೂ ರೂಪಾಯಿ ಹೆಚ್ಚಿಸಿರಲಿಲ್ಲ ಎಂದು ಸದನಕ್ಕೆ ತಿಳಿಸದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಇದೆ. ಅದರಲ್ಲಿ ನಮ್ಮ ರಾಜ್ಯದ ಪಾಲು ಹೆಚ್ಚಿದೆ. ಗೌರವ ಧನ ಹೆಚ್ಚಳದ ಬಗ್ಗೆ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿದರು, ಇದುವರೆಗೂ ನಯಾ ಪೈಸೆ ಬಿಡುಗಡೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗೌರವ ಧನ ಹೆಚ್ಚಳ ಮಾಡಿರುವ ರಾಜ್ಯಗಳ ಪೈಕಿ ಇಡೀ ದೇಶದಲ್ಲೆ ನಮ್ಮ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರಕ್ಕೆ ಬದ್ಧತೆ ಇರುವ ಕಾರಣ ಗೌರವ ಧನ ಹೆಚ್ಚಳ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಸದನಕ್ಕೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಗೋಣಿಕೊಪ್ಪದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಗೋಣಿಕೊಪ್ಪ: ಪಟ್ಟಣದಲ್ಲಿ ಇಂದು ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಗೆ ಶಾಲಾ-ಕಾಲೇಜುಗಳ ಮೈದಾನಗಳು ಕೆರೆಯಂತಾಗಿದ್ದು, ಮಕ್ಕಳು…

6 hours ago

ಸಿಇಟಿ: ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್.‌15ಕ್ಕೆ ಹಿಂದೂಡಿಕೆ

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್.‌18ಕ್ಕೆ ಬದಲಾಗಿ ಏಪ್ರಿಲ್.‌15ರಂದೇ…

7 hours ago

ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500…

7 hours ago

ಮಡಿಕೇರಿ| ಮಾರ್ಚ್.21ರಿಂದ ಹುಲಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್

ಮಡಿಕೇರಿ: ಫ್ರೆಂಡ್ಸ್ ಹುಲಿತಾಳ ಇವರ ವತಿಯಿಂದ ಪ್ರಥಮ ವರ್ಷದ ಹುಳಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯವು ಮಾರ್ಚ್ 21,22,23ರಂದು ಮಡಿಕೇರಿಯ…

7 hours ago

ಆರ್‌ಎಸ್‌ಎಸ್‌ನ್ನು ಎದುರಿಸಲು ನಾವು ಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು. ನೀವು ಬ್ರಿಟಿಷರ ಏಜೆಂಟರು ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಈ…

8 hours ago

ಪಿರಿಯಾಪಟ್ಟಣ: ಕ್ರೀಡಾಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದ ಮಹಿಳೆಯರು

ಪಿರಿಯಾಪಟ್ಟಣ: ನಿತ್ಯ ಮನೆ ಕೆಲಸ, ಕೃಷಿ ಕೆಲಸದಲ್ಲಿಯೇ ಸಂಪೂರ್ಣ ಸಮಯ ಕಳೆಯುತ್ತಿದ್ದ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮಕ್ಕಳಂತೆ ಸಂಭ್ರಮಿಸಿದ್ದಾರೆ.…

8 hours ago