ಬೆಂಗಳೂರು: ಮಾಸಿಕ 15 ಸಾವಿರ ರೂ ವೇತನ ನಿಗದಿಗೆ ಒತ್ತಾಯಿಸಿ ಡಿಸೆಂಬರ್.1ರಿಂದ ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಡಿಸೆಂಬರ್.1ರಿಂದ ಬೆಂಗಳೂರು, ತುಮಕೂರು, ಮಂಡ್ಯ, ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವರ ಮನೆ ಮುಂದೆ ಪ್ರತಿಭಟನೆ ಕೈಗೊಳ್ಳಲಾಗಿದೆ.
ಸಿಐಟಿಯು ಪ್ರಧಾನ ಕಾರ್ಯದರ್ಶಿ ವರಲಕ್ಷ್ಮೀ ಎಸ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಎಲ್ಲಾ ರೀತಿಯ ಸೌಲಭ್ಯ ನೀಡಬೇಕು. ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ನೀಡಬೇಕು. ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.





