ಬೆಂಗಳೂರು: ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ 11ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 38 ವರ್ಷದ ಗಂಗಾ ತಡರಾತ್ರಿ ಅಸ್ವಸ್ಥಗೊಂಡಿದ್ದಾರೆ.
ರಾತ್ರಿ ಎರಡೂವರೆ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಆಂಬುಲೆನ್ಸ್ನಲ್ಲಿ ನಗರದ ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.
ಕಳೆದ ಹತ್ತು ದಿನಗಳಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 20ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಈ ನಡುವೆಯೂ ಗೌರವಧನ ಹೆಚ್ಚಳಕ್ಕೆ ಒತ್ತಾಯಿಸಿ ಕಾರ್ಯಕರ್ತೆಯರು ಹೋರಾಟ ಮುಂದುವರಿಸಿದ್ದಾರೆ.
ಇಂದು ಆಶಾ ಕಾರ್ಯಕರ್ತೆಯರ ಜೊತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭೆ ನಡೆಸಲಿದ್ದು, ಗೌರವಧನ ಹೆಚ್ಚಳದ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತಾರೆ ಎಂಬ ಕುತೂಹಲ ಮೂಡಿದೆ.




