ರಾಜ್ಯ

ಮೆಟ್ರೋ ಫೇಸ್-2 ಉದ್ಘಾಟನೆಗೆ ಅಶೋಕ್‌ʼಗಿಲ್ಲ ಆಹ್ವಾನ! ; ಇದು ಕುರ್ಚಿ ಕಿತ್ತುಕೊಳ್ಳುವ ಸಂದೇಶವೇ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು : ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಸ್ವಪಕ್ಷದವರು ವಿರೋಧಿಸುವ ನಾಯಕರಾಗಿದ್ದಾರೆಯೇ! ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಬೆಂಗಳೂರು ಮೆಟ್ರೋ ಫೇಸ್-2 ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ ಕೇಂದ್ರ ಸರ್ಕಾರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೇ ವೇದಿಕೆಯಲ್ಲಿ ಜಾಗ ನೀಡುವುದನ್ನು ನಿರಾಕರಿಸಿದೆ. ಕೇಂದ್ರ ಸರ್ಕಾರ ಪ್ರೊಟೋಕಾಲ್ ಮರೆತಿದೆಯೇ? ಅಥವಾ ಉದ್ದೇಶಪೂರ್ವಕ ಕಡೆಗಣನೆಯೇ? ಮೊದಲ ಬಾರಿ ಶಾಸಕರಾಗಿರುವ ಹಾಗೂ ಬೆಂಗಳೂರಿನ ಶಾಸಕರಲ್ಲದಿರುವ ಬಿ.ವೈ.ವಿಜಯೇಂದ್ರ ಅವರಿಗೆ ಸಿಕ್ಕ ಅವಕಾಶ ಅಶೋಕ್ ಅವರಿಗೆ ಏಕಿಲ್ಲ ಎಂದು ಪ್ರಿಯಾಂಕ್ ಖರ್ಗೆ ಛೇಡಿಸಿದ್ದಾರೆ.

ಅಶೋಕ್ ಅವರೇ, ತಾವು ಬೆಂಗಳೂರು ನಗರವನ್ನು ಪ್ರತಿನಿಧಿಸಿರುವ ಶಾಸಕರಾಗಿದ್ದರೂ, ಜೊತೆಗೆ ವಿರೋಧ ಪಕ್ಷದ ನಾಯಕರಾಗಿದ್ದರೂ, ಬಿಜೆಪಿ ಪಕ್ಷದ ಹಿರಿಯ ನಾಯಕ ಎನಿಸಿಕೊಂಡಿದ್ದರೂ, ಹಲವು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರೂ ನಿಮ್ಮನ್ನು ಕಡೆಗಣಿಸಲಾಗಿದೆ ಎಂದರೆ ನಿಮ್ಮ ಕುರ್ಚಿ ಕಿತ್ತುಕೊಳ್ಳುವ ಸಂದೇಶ ಬಂದಿದೆ ಎಂದು ಭಾವಿಸೋಣವೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದ್ದಾರೆ.

ಯಾರು ಯಾರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿಲ್ಲ ಎಂದು ತಲೆಕೆಡಿಸಿಕೊಂಡು ಕುಳಿತಿದ್ದ ತಮಗೆ ಈಗ “ನನಗೇಕೆ ಆಹ್ವಾನವಿಲ್ಲ” ಎಂದು ತಲೆಕೆಡಿಸಿಕೊಂಡು ಕೂರುವ ಸಮಯ ಬಂದಿದೆ. ಇನ್ನಾದರೂ ಇತರರ ಮನೆ ಇಣುಕುವ ಬದಲು ನಿಮ್ಮ ಬುಡ ಅಲ್ಲಾಡುತ್ತಿರುವುದನ್ನು ಗಮನಿಸಿದರೆ ಒಳ್ಳೆಯದು! ಎಂಬ ಸಲಹೆಯನ್ನೂ ಸಚಿವ ಪ್ರಿಯಾಂಕ್‌ ಖರ್ಗೆ ಅವರು ವಿರೋಧ ಪಕ್ಷದ ನಾಯಕರಿಗೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

24 mins ago

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

57 mins ago

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

2 hours ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

3 hours ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

3 hours ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

4 hours ago