priyanka kharghe
ಬೆಂಗಳೂರು : ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಸ್ವಪಕ್ಷದವರು ವಿರೋಧಿಸುವ ನಾಯಕರಾಗಿದ್ದಾರೆಯೇ! ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಬೆಂಗಳೂರು ಮೆಟ್ರೋ ಫೇಸ್-2 ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ ಕೇಂದ್ರ ಸರ್ಕಾರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೇ ವೇದಿಕೆಯಲ್ಲಿ ಜಾಗ ನೀಡುವುದನ್ನು ನಿರಾಕರಿಸಿದೆ. ಕೇಂದ್ರ ಸರ್ಕಾರ ಪ್ರೊಟೋಕಾಲ್ ಮರೆತಿದೆಯೇ? ಅಥವಾ ಉದ್ದೇಶಪೂರ್ವಕ ಕಡೆಗಣನೆಯೇ? ಮೊದಲ ಬಾರಿ ಶಾಸಕರಾಗಿರುವ ಹಾಗೂ ಬೆಂಗಳೂರಿನ ಶಾಸಕರಲ್ಲದಿರುವ ಬಿ.ವೈ.ವಿಜಯೇಂದ್ರ ಅವರಿಗೆ ಸಿಕ್ಕ ಅವಕಾಶ ಅಶೋಕ್ ಅವರಿಗೆ ಏಕಿಲ್ಲ ಎಂದು ಪ್ರಿಯಾಂಕ್ ಖರ್ಗೆ ಛೇಡಿಸಿದ್ದಾರೆ.
ಅಶೋಕ್ ಅವರೇ, ತಾವು ಬೆಂಗಳೂರು ನಗರವನ್ನು ಪ್ರತಿನಿಧಿಸಿರುವ ಶಾಸಕರಾಗಿದ್ದರೂ, ಜೊತೆಗೆ ವಿರೋಧ ಪಕ್ಷದ ನಾಯಕರಾಗಿದ್ದರೂ, ಬಿಜೆಪಿ ಪಕ್ಷದ ಹಿರಿಯ ನಾಯಕ ಎನಿಸಿಕೊಂಡಿದ್ದರೂ, ಹಲವು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರೂ ನಿಮ್ಮನ್ನು ಕಡೆಗಣಿಸಲಾಗಿದೆ ಎಂದರೆ ನಿಮ್ಮ ಕುರ್ಚಿ ಕಿತ್ತುಕೊಳ್ಳುವ ಸಂದೇಶ ಬಂದಿದೆ ಎಂದು ಭಾವಿಸೋಣವೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದ್ದಾರೆ.
ಯಾರು ಯಾರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿಲ್ಲ ಎಂದು ತಲೆಕೆಡಿಸಿಕೊಂಡು ಕುಳಿತಿದ್ದ ತಮಗೆ ಈಗ “ನನಗೇಕೆ ಆಹ್ವಾನವಿಲ್ಲ” ಎಂದು ತಲೆಕೆಡಿಸಿಕೊಂಡು ಕೂರುವ ಸಮಯ ಬಂದಿದೆ. ಇನ್ನಾದರೂ ಇತರರ ಮನೆ ಇಣುಕುವ ಬದಲು ನಿಮ್ಮ ಬುಡ ಅಲ್ಲಾಡುತ್ತಿರುವುದನ್ನು ಗಮನಿಸಿದರೆ ಒಳ್ಳೆಯದು! ಎಂಬ ಸಲಹೆಯನ್ನೂ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿರೋಧ ಪಕ್ಷದ ನಾಯಕರಿಗೆ ನೀಡಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…