ರಾಜ್ಯ

ರಾಜ್ಯ ಸರ್ಕಾರದ ಮೊದಲ ವಿಕೆಟ್‌ ಪತನದ ಭವಿಷ್ಯ ನುಡಿದ ಅಶೋಕ್

ಶಿವಮೊಗ್ಗ:  ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ್‌ ಅವರ ಆತ್ಮಹತ್ಯೆ ಸಂಬಂಧ ಬಿಜೆಪಿ ಮೃತರ ಕುಟುಂಕ್ಕೆ ನ್ಯಾಯ ಕೊಡಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ರಾಜೀನಾಮೆ ಕೊಡಿಸಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.

ಅವರು ಇಂದು(ಮೇ.31 ) ಮೃತ ಪಿ.ಚಂದ್ರಶೇಖರನ್‌ ಅವರ ಕುಟುಂಬದವರನ್ನು  ಭೇಟಿಯಾಗಿ ಸಾಂತ್ವನ ಹೇಳಿ, ಸರಕಾರದ ಮೊದಲ ವಿಕೆಟ್ ಪತನ ಖಚಿತ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್‌ ಅವರ ಕುಟುಂಬ ಬೀದಿಗೆ ಬಂದಿದೆ. ಯಾವುದೇ ಹಿರಿಯ ಅಧಿಕಾರಿಗಳು, ಗೃಹ ಸಚಿವರು ಮೃತರ ಕುಟುಂಬಕ್ಕೆ ನೆರವು ನೀಡಿಲ್ಲ. 1 ಕೋಟಿ ರೂ. ಗೂ ಅಧಿಕ ಅಕ್ರಮ ನಡೆದಾಗ ಅದು ಸಿಬಿಐ ತನಿಖೆಗೆ ಒಳಪಡುತ್ತದೆ. ಬ್ಯಾಂಕ್‌ನವರು ಸಿಬಿಐಗೆ ವಹಿಸಿ ಎಂದು ಮನವಿ ಮಾಡಿದ್ದಾರೆ. ಇದು ಸಿಬಿಐಗೆ ಹೋಗುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಯದಿಂದಾಗಿ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಸಚಿವರು ಹಾಗೂ ಮುಖ್ಯಮಂತ್ರಿಯ ಬೆಂಬಲವಿಲ್ಲದೆ ಇಂತಹ ಅವ್ಯವಹಾರ ನಡೆಯಲು ಸಾಧ್ಯವಿಲ್ಲ. ಸಿಐಡಿ ತನಿಖೆ ಎನ್ನುವುದು ಕಾಟಾಚಾರದ ತನಿಖೆ. ಇಂತಹ ತನಿಖೆ ಮಾಡಲು ಕುಟುಂಬದವರು ಅಥವಾ ವಿರೋಧ ಪಕ್ಷದವರು ಕೇಳಬೇಕು. ಆದರೆ ಯಾರೂ ಕೇಳದೆ ಸರ್ಕಾರವೇ ಪ್ರಕರಣ ಮುಚ್ಚಿಹಾಕಲು ತನಿಖೆ ಮಾಡಿಸುತ್ತಿದೆ. ದಲಿತರ 187 ಕೋಟಿ ರೂ. ಹಣ ಗುಳುಂ ಆದರೂ ಒಬ್ಬರನ್ನೂ ಬಂಧಿಸಿಲ್ಲ. ಅದೇ ಸಣ್ಣ ವಿಚಾರಗಳಿಗೆ ಮನೆಗೆ ಹೋಗಿ ಬಂಧಿಸುತ್ತಾರೆ. ಆರೋಪಿಗಳನ್ನು ಬಂಧಿಸಿದರೆ ಮುಖ್ಯಮಂತ್ರಿ ಮೇಲೆಯೇ ಆರೋಪ ಬರುತ್ತದೆ ಎಂಬ ಭಯವಿದೆ. ಅದಕ್ಕಾಗಿ ಸರಿಯಾಗಿ ತನಿಖೆ ಮಾಡಿಸುತ್ತಿಲ್ಲ ಎಂದು ದೂರಿದರು.

ಗೃಹ ಸಚಿವರಿಗೆ ಹಿಡಿತವಿಲ್ಲ

ಡಾ.ಜಿ.ಪರಮೇಶ್ವರ್‌ ಅವರಿಗೆ ಗೃಹ ಇಲಾಖೆಯಲ್ಲಿ ಆಸಕ್ತಿಯೂ ಇಲ್ಲ, ಹಿಡಿತವೂ ಇಲ್ಲ. ಗೃಹ ಇಲಾಖೆಯನ್ನು ಸಿಎಂ, ಡಿಸಿಎಂ ಮತ್ತು ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ವಹಣೆ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಮಾನ ಮರ್ಯಾದೆ ಉಳಿಯಬೇಕೆಂದರೆ ಅವರಾಗಿಯೇ ಸಿಬಿಐ ತನಿಖೆಗೆ ವಹಿಸುವುದು ಉತ್ತಮ. ಕಾಂಗ್ರೆಸ್‌ನ ಕೆ.ಜೆ.ಜಾರ್ಜ್‌ ಅವರಿಗೆ ಸಿಬಿಐ ಕ್ಲೀನ್‌ ಚಿಟ್‌ ನೀಡಿತ್ತು. ತಪ್ಪಿತಸ್ಥರಲ್ಲವೆಂದರೆ ಕ್ಲೀನ್‌ ಚಿಟ್‌ ಸಿಗುತ್ತದೆ. ಇದು ಬಡವರ ಹಣವಾಗಿದ್ದು, ವಾಲ್ಮೀಕಿ ಸಮುದಾಯವರಿಗೆ ಸಾಲ ನೀಡಲು ಈ ಹಣ ಬಳಕೆಯಾಗುತ್ತಿತ್ತು. ಈಗ ಸರ್ಕಾರ ಎಲ್ಲ ಬಗೆಯ ಸಾಲಗಳನ್ನು ಸ್ಥಗಿತಗೊಳಿಸಿದೆ ಎಂಬ ಸುದ್ದಿ ಬಂದಿದೆ. ಪರಿಶಿಷ್ಟ ಪಂಗಡದವರಿಗೆ ಈಗ ಸಾಲವೇ ಇಲ್ಲದೆ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟ ಪಂಗಡದ ಜನರ ಬಗ್ಗೆ ಗೌರವವೇ ಇಲ್ಲ. ಗೌರವ ಇದ್ದರೆ ಸರಿಯಾದ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ಮತ್ತೊಂದು ಆತ್ಮಹತ್ಯೆ

ಕೆಆರ್‌ಐಡಿಎಲ್‌ ಗುತ್ತಿಗೆದಾರ ಪಿ.ಸಿ.ಗೌಡರ್‌ ಅವರ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಈಗ ಉತ್ತರ ಹೇಳಬೇಕು. ಕೂಡಲೇ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಿ ತನಿಖೆಗೆ ಎಸ್‌ಐಟಿ ರಚಿಸಬೇಕು. ಗುತ್ತಿಗೆದಾರರ ಬಾಕಿ ಪಾವತಿಸಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಕೆ.ಎಸ್‌.ಈಶ್ವರಪ್ಪನವರ ಪ್ರಕರಣದಲ್ಲಿ ರಸ್ತೆ ರಸ್ತೆಯಲ್ಲಿ ಕಾಂಗ್ರೆಸ್ಸಿಗರು ಬಾಯಿ ಬಡಿದುಕೊಂಡಿದ್ದರು. ಈಗ ಕಮಿಶನ್‌ಗಾಗಿ ಗುತ್ತಿಗೆದಾರರಿಗೆ ಕಿರುಕುಳ ನೀಡುತ್ತಿದ್ದಾರೆ. ಅಧಿಕಾರಿಗಳಿಗೆ ಕೆಲಸ ಮಾಡಲು ಬಿಡುತ್ತಿಲ್ಲ. ಸಚಿವರು ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ಬಿಡುವುದಿಲ್ಲ. ಕುಟುಂಬದವರಿಗೆ ನ್ಯಾಯ ಕೊಡಿಸಲು ಎಲ್ಲ ಬಗೆಯ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago