ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ ಹಳ್ಳಿ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣದ ಹೆಸರನ್ನು ಬದಲಾಯಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಾಮಾಜಿಕ ಜಾಲ ತಾಣದಲ್ಲಿ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗುತ್ತದೆ ಎಂಬ ವದಂತಿ ಹಬ್ಬಿದೆ. ಇದನ್ನು ಯಾರೊಬ್ಬರು ನಂಬಬಾರದು ಎಂದು ಮನವಿ ಮಾಡಿದ್ದಾರೆ. ಈ ರೈಲ್ವೆ ನಿಲ್ದಾಣದ ಹೆಸರನ್ನು ಬದಲಾವಣೆ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಇಲಾಖೆಯ ಮುಂದೆ ಇಲ್ಲ ಹೇಳಿದ್ದಾರೆ.
ಮೈಸೂರಿಗೆ ಭೇಟಿ ನೀಡಿದ ವೇಳೆ, ಮಾಜಿ ಸಂಸದರಾದ ಪ್ರತಾಪ್ ಸಿಂಹರವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದು, ಈ ಕುರಿತು ಪರಿಶೀಲಿಸುವ ಭರವಸೆ ನೀಡಿದ್ದೇನೆ ಎಂದು ಸೋಮಣ್ಣ ತಿಳಿಸಿದ್ದಾರೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…