Mysore
34
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ಗೋಮಾಂಸ ತಿನ್ನಲು, ಗೋವು ಹತ್ಯೆ ಮಾಡಲು ಅವಕಾಶ ನೀಡಬೇಕಾ?: ಅಶ್ವಥ್‌ ನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಗೋಮಾಂಸ ತಿನ್ನಲು ಮತ್ತು ಗೋವುಗಳನ್ನು ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂದು ಕಾಂಗ್ರೆಸ್‌ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.13) ನಿನ್ನೆ ಚಾಮರಾಜಪೇಟೆಯಲ್ಲಿ ನಡೆದ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೃತ್ಯದ ಹಿಂದೆ ಕೆಲ ಸಂಘಟನೆಗಳು ಇರಬಹುದು. ಆದರೆ ಕಾಂಗ್ರೆಸ್‌ನ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿ ಈ ರೀತಿಯಾಗುತ್ತದೆ. ಅವರು ಈ ರೀತಿ ಮಾಡಲು ಮಾನಸಿಕವಾಗಿ ಕೆಲ ವ್ಯಕ್ತಿಗಳಿಗೆ ಉತ್ತೇಜನ ನೀಡಿದ್ದಾರೆ. ಅಲ್ಲದೇ ಗೋಮಾಂಸ ಮತ್ತು ಗೋವುಗಳ ವಿಚಾರದಲ್ಲಿ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರ ಈ ವೇಳೆ ಗೋಮಾಂಸ ಮತ್ತು ಗೋವುಗಳ ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂಬುದನ್ನು ತಿಳಿಸಬೇಕು. ಕಾಂಗ್ರೆಸ್‌ ಸರ್ಕಾರ ಎಲ್ಲೋ ಒಂದು ಸಮುದಾಯದ ಜನರನ್ನು ಓಲೈಕೆ ಮಾಡುತ್ತಿದೆ ಎಂಬಂತೆ ಕಾಣುತ್ತಿದ್ದು, ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಹೀಗಾಗಿ ರಾಜ್ಯದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಕಿಡಿಕಾರಿದರು.

Tags:
error: Content is protected !!