ಬೆಂಗಳೂರು: ರಾಜ್ಯದಲ್ಲಿ ಗೋಮಾಂಸ ತಿನ್ನಲು ಮತ್ತು ಗೋವುಗಳನ್ನು ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂದು ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.13) ನಿನ್ನೆ ಚಾಮರಾಜಪೇಟೆಯಲ್ಲಿ ನಡೆದ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೃತ್ಯದ ಹಿಂದೆ ಕೆಲ ಸಂಘಟನೆಗಳು ಇರಬಹುದು. ಆದರೆ ಕಾಂಗ್ರೆಸ್‌ನ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿ ಈ ರೀತಿಯಾಗುತ್ತದೆ. ಅವರು ಈ ರೀತಿ ಮಾಡಲು ಮಾನಸಿಕವಾಗಿ ಕೆಲ ವ್ಯಕ್ತಿಗಳಿಗೆ ಉತ್ತೇಜನ ನೀಡಿದ್ದಾರೆ. ಅಲ್ಲದೇ ಗೋಮಾಂಸ ಮತ್ತು ಗೋವುಗಳ ವಿಚಾರದಲ್ಲಿ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಈ ವೇಳೆ ಗೋಮಾಂಸ ಮತ್ತು ಗೋವುಗಳ ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂಬುದನ್ನು ತಿಳಿಸಬೇಕು. ಕಾಂಗ್ರೆಸ್ ಸರ್ಕಾರ ಎಲ್ಲೋ ಒಂದು ಸಮುದಾಯದ ಜನರನ್ನು ಓಲೈಕೆ ಮಾಡುತ್ತಿದೆ ಎಂಬಂತೆ ಕಾಣುತ್ತಿದ್ದು, ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಹೀಗಾಗಿ ರಾಜ್ಯದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಕಿಡಿಕಾರಿದರು.
ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…