ರಾಜ್ಯ

ರಾಮನಗರ ಜಿಲ್ಲೆಗೆ ಮರು ನಾಮಕರಣ| ಕೇಂದ್ರದಿಂದ ರಾಜ್ಯ ಸರ್ಕಾರದ ಪ್ರಸ್ತಾವನೆ ತಿರಸ್ಕಾರ ಗುಡ್‌ ನ್ಯೂಸ್‌: ಅಶ್ವಥ್‌ ನಾರಾಯಣ

ಬೆಂಗಳೂರು: ಕೇಂದ್ರ ಸರ್ಕಾರವೂ, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕಾರ ಮಾಡಿರುವುದು ಗುಡ್‌ ನ್ಯೂಸ್‌ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮನಗರದಲ್ಲಿ ರಿಯಲ್‌ ಎಸ್ಟೇಟ್‌ ಮಾಡುವ ಉದ್ದೇಶವಾಗಿತ್ತು. ಆದರೆ ಇದಕ್ಕೆ ಕೇಂದ್ರ ಸರ್ಕಾರ ಅಡ್ಡಿಪಡಿಸಿದೆ. ಏನೇ ಆಗಲಿ ನಮ್ಮ ರಾಜ್ಯದ ಈ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವುದು ಒಳ್ಳೆಯದೇ ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರ ರಾಮನಗರ ಎಂಬ ಹೆಸರನ್ನು ಬದಲಾಯಿಸಬೇಕೆಂದು ಹೊರಟಿದ್ದು, ಆ ಜಿಲ್ಲೆಗೆ ಮಾಡಿದ ಅಪಮಾನವಾಗಿದೆ. ಇನ್ನು ರಾಮನಗರ ಜಿಲ್ಲೆ ಇದೇ ಹೆಸರಿನಲ್ಲಿ ಮುಂದುವರಿಯಬೇಕು ಎಂದರು.

ಅರ್ಚನ ಎಸ್‌ ಎಸ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

6 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

6 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

6 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

7 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

7 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

8 hours ago