ಬೆಂಗಳೂರು: ಬೆಸ್ಕಾಂ ಮತ್ತು ಎಸ್ಕಾಂಗಳ ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ ಸುಮಾರು 15,568 ಕೋಟಿ ರೂ. ಮೊತ್ತದ ಹಗರಣ ನಡೆದಿದ್ದು, ಇದು ರಾಜ್ಯದ ಅತಿ ದೊಡ್ಡ ಹಗರಣವಾಗಿದೆ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಆರೋಪಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಮಾರ್ಚ್.25) ಎಸ್.ಆರ್.ವಿಶ್ವನಾಥ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಮಾರ್ಟ್ ಮೀಟರ್ ಹಗರಣ ಆರೋಪ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅನೇಕ ವಿಚಾರಗಳಲ್ಲಿ ಅವ್ಯವಹಾರ ನಡೆಸಿದೆ. ಅದರಲ್ಲಿ ಸ್ಮಾರ್ಟ್ ಮೀಟರ್‌ಗಳ ಖರೀದಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಸದನದಲ್ಲಿ ಈ ಬಗ್ಗೆ ನಾನು ಮತ್ತು ವಿಶ್ವನಾಥ್ ಇಬ್ಬರೂ ಕೂಡ ಚರ್ಚಿಸಿದ್ದೇವೆ. ಅಲ್ಲದೇ ಈ ಆರೋಪಕ್ಕೆ ಸದನದಲ್ಲೇ ಉತ್ತರ ನೀಡುತ್ತೇನೆಂದು ಇಂಧನ ಸಚಿವರು ತಿಳಿಸಿದ್ದರು. ಆದರೆ ಆ ದಿನ ಸದನಕ್ಕೆ ಬಂದಿದ್ದರೂ ಸಹ ನಾಪತ್ತೆಯಾಗಿದ್ದರೂ ಎಂದು ಹೇಳಿದರು.
ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯನಾ? ಕೆಇಆರ್‌ಸಿ ಗೈಡ್‌ಲೈನ್ಸ್ ಪ್ರಕಾರ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುವಂತಿಲ್ಲ. ತಾತ್ಕಾಲಿಕ ಗ್ರಾಹಕರಿಗೆ ಮಾತ್ರ ಕಡ್ಡಾಯ ಮಾಡಬಹುದೇ ಹೊರತು ಹೊಸ ಗ್ರಾಹಕರಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೇ ಸ್ಮಾರ್ಟ್ಮೀಟರ್‌ಗಳ ಖರೀದಿಯಲ್ಲಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆಯಾಗಿದೆ ಎಂದರು.
ರಾಜಶ್ರೀ ಕಂಪನಿಗೆ ಅನುಕೂಲ ಆಗುವಂತೆ ಟೆಂಡರ್ ನೀಡಿದ್ದಾರೆ. ಕೆಟಿಪಿಪಿ ಕಾಯ್ದೆ ಪ್ರಕಾರ ಟೆಂಡರ್ ಪಡೆದುಕೊಳ್ಳುವ ಸಂಸ್ಥೆಯ ಬಳಿ 6,800 ಕೋಟಿ ರೂ. ಬಿಡ್ ಸಾಮರ್ಥ್ಯ ಮೊತ್ತ ಇರಬೇಕು. ಟೆಂಡರ್ ಪಡೆದ ರಾಜಶ್ರೀ ಕಂಪನಿ ಬಳಿ ಇದ್ದಿದ್ದು ಕೇವಲ 400 ಕೋಟಿ ರೂ. ಟೆಂಡರ್ ಮೌಲ್ಯ 1,920 ಕೋಟಿ ಇರಬೇಕಿತ್ತು. ಟೆಂಡರ್‌ನಲ್ಲಿ ಇದಿದ್ದು ಕೇವಲ 107 ಕೋಟಿ ರೂ. ಅಷ್ಟೇ. ಹೀಗಿದ್ದರೂ ಬ್ಲಾಕ್‌ಲಿಸ್ಟ್ನಲ್ಲಿರುವ ಯಾವುದೇ ಸಂಸ್ಥೆಗೆ ಟೆಂಡರ್ ನೀಡುವಂತಿಲ್ಲವೆಂದು ಕೆಟಿಪಿಪಿ ಕಾಯ್ದೆಯಲ್ಲಿದೆ. ಆದರೆ ರಾಜ್ಯ ಸರ್ಕಾರ, ಉತ್ತರ ಪ್ರದೇಶದಲ್ಲಿ ಬ್ಲಾಕ್‌ಲಿಸ್ಟ್ ಆಗಿರುವ ಬಿಸಿಐಟಿಎಸ್ ಕಂಪನಿಗೆ ಸಾಫ್ಟ್‌ವೇರ್ ಟೆಂಡರ್ ನೀಡಿದ್ದಾರೆ. ಹೀಗಾಗಿ ಈಗ ಇರುವ ಟೆಂಡರ್ ರದ್ದು ಮಾಡಿ ನಿಯಾಮಾನುಸಾರ ಟೆಂಡರ್ ಕರೆಯಬೇಕು ಎಂದು ಆಗ್ರಹಿಸಿದರು.
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…
ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…