Mysore
27
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್‌

ಬೆಂಗಳೂರು: ಕಂಬಳ ಕೆರೆ ಕಾರ್ಯಕ್ರಮಕ್ಕೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.

ಪ್ರಪ್ರಥಮ ಬಾರಿಗೆ ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ನಡೆಯುತ್ತಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ ನ.25, 26 ಎರಡು ದಿನಗಳ ಕಾಲ ಪಂದ್ಯ ನಡೆಯಲಿದ್ದು ದೈವ, ದೇವರ ಪ್ರಸಾದ ಸಮರ್ಪಿಸುವ ಮೂಲಕ ಕಂಬಳ ಕೆರೆಯ ನೀರಿಗೆ ಪೂಜೆ ಸಲ್ಲಿಸಲಾಯಿತು.
೮ ಸಾವಿರ ಜನರ ಕೂತು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಸುಮಾರು 200 ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ. ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್​ಕುಮಾರ್ ಹೆಸರು ಇಡಲಾಗಿದೆ. ಕಂಬಳದ ಟ್ರ್ಯಾಕ್‌ಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್​ ರೈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!