ಬೆಂಗಳೂರು: ಕಂಬಳ ಕೆರೆ ಕಾರ್ಯಕ್ರಮಕ್ಕೆ ಯುವರತ್ನ ಡಾ. ಪುನಿತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್‌ಕುಮಾರ್ ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.
ಪ್ರಪ್ರಥಮ ಬಾರಿಗೆ ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ನಡೆಯುತ್ತಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ ನ.25, 26 ಎರಡು ದಿನಗಳ ಕಾಲ ಪಂದ್ಯ ನಡೆಯಲಿದ್ದು ದೈವ, ದೇವರ ಪ್ರಸಾದ ಸಮರ್ಪಿಸುವ ಮೂಲಕ ಕಂಬಳ ಕೆರೆಯ ನೀರಿಗೆ ಪೂಜೆ ಸಲ್ಲಿಸಲಾಯಿತು.
೮ ಸಾವಿರ ಜನರ ಕೂತು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಸುಮಾರು 200 ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ. ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್‌ಕುಮಾರ್ ಹೆಸರು ಇಡಲಾಗಿದೆ. ಕಂಬಳದ ಟ್ರ್ಯಾಕ್‌ಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…