ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಕಾವೇರಿ ನಿವಾಸದಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಇಂದು(ಫೆಬ್ರವರಿ.25) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ. ಅಲ್ಲದೇ ಈ ವೇಳೆಯೇ ಪೊಲೀಸ್ ಮಹಾನಿರ್ದೇಶಕ ಆಲೋಕ್ ಮೋಹನ್ ಅವರು ಸಹ ಭೇಟಿಯಾಗಿ, ಬೆಳಗಾವಿ ಗಲಾಟೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ.
ಇನ್ನು ಪ್ರಕರಣದ ಮಾಹಿತಿಯನ್ನು ಪಡೆದ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಗಡಿಭಾಗದಲ್ಲಿ ಕಟ್ಟುನಿಟ್ಟಾಗಿ ಬಂದೋಬಸ್ತ್ ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೇ ಬಸ್‌ಗಳ ಓಡಾಟ ಹಾಗೂ ರಕ್ಷಣೆ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಕಾರ್ಯದರ್ಶಿ ಅವರೊಂದಿಗೆ ಚರ್ಚಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಆದೇಶ ಮಾಡಿದ್ದಾರೆ. ಇನ್ನು ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರ ಅವರೊಂದಿಗೆ ಘಟನೆಯ ಬಗ್ಗೆ ಸಮಾಲೋಚಿಸುವಂತೆ ಡಿಜಿಪಿ ಆಲೋಕ್ ಮೋಹನ್ ಅವರಿಗೆ ಸೂಚಿಸಿದ್ದಾರೆ.
ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್ ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ…
ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ…
ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ…
ನವದೆಹಲಿ: ನೆರೆಯ ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…
ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು…
ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ…