ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ವಿಸ್ತೃತ ಪೀಠಕ್ಕೆ ವಹಿಸಿ ಆದೇಶಿಸಿದೆ.
ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ಏಕ ಪೀಠದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಯಿತು.
ಈ ವೇಳೆ ಹೈಕೋರ್ಟ್ ನ್ಯಾಯಪೀಠದ ಮುಂದೆ ಕಾನೂನು ದುರುಪಯೋಗವನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ ಎಂಬುದಾಗಿ ವಾದವನ್ನು ಮಂಡಿಸಲಾಯಿತು.
ಈ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದೊಂದು ಗಂಭೀರ ಪ್ರಕರಣವಾಗಿದ್ದು, ಡಿಕೆ ಶಿವುಕಮಾರ್ ಪ್ರಕರಣವನ್ನು ವಿಸ್ತೃತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸೋದಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಮೂಲಕ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿಗೊಳಿಸಿದೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…