krishna bhairegowda
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾಪ ಇಲ್ಲ. ಈಗಾಗಲೇ ರಚನೆಯಾಗಿರುವ ತಾಲ್ಲೂಕುಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ತಮ್ಮ ಕ್ಷೇತ್ರಕ್ಕೆ ಸೇರಿದ ಆಂಧ್ರಪ್ರದೇಶ ಗಡಿಭಾಗದಲ್ಲಿರುವ ಪರಶುರಾಮಪುರ ಹೋಬಳಿಯನ್ನು ಹೊಸ ತಾಲ್ಲೂಕುನ್ನಾಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಈ ಹಿಂದೆ 2009ರಲ್ಲಿ ಹಿರಿಯ ಅಧಿಕಾರಿ ಎಂ.ಬಿ.ಪ್ರಕಾಶ್ ಅವರ ಸಮಿತಿ, ವೈಜ್ಞಾನಿಕ ಅಧ್ಯಯನ ಮಾಡಿ ಹೊಸ ತಾಲ್ಲೂಕುಗಳ ರಚನೆಗೆ ಶಿಫಾರಸ್ಸು ಮಾಡಿತ್ತು. ಆದರೆ ಸರ್ಕಾರ ಆ ವರದಿಯನ್ನು ಹೆಚ್ಚು ಪರಿಗಣಿಸಲಿಲ್ಲ. 2013-14ರಲ್ಲಿ 43 ಹೊಸ ತಾಲ್ಲೂಕುಗಳನ್ನು ರಚಿಸಲಾಗಿದೆ. ಆನಂತರ ಬಂದ ಸರ್ಕಾರಗಳು ಬೇರೆ ಬೇರೆ ಕಾರಣಗಳಿಗೆ ನೂತನ ತಾಲ್ಲೂಕುಗಳನ್ನು ಘೋಷಣೆ ಮಾಡಿವೆ ಎಂದು ಹೇಳಿದರು.
ಸದ್ಯದ ಪರಿಸ್ಥಿತಿಯಲ್ಲಿ ತಾಲ್ಲೂಕುಗಳ ರಚನೆ ಕಷ್ಟಸಾಧ್ಯ. ಮುಂದಿನ ದಿನಗಳಲ್ಲಿ ಸರ್ಕಾರ ಅದನ್ನು ಪರಿಶೀಲನೆ ನಡೆಸಲಿದೆ ಎಂದಾಗ ರಘುಮೂರ್ತಿ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಎಂ.ಬಿ.ಪ್ರಕಾಶ್ ಅವರ ಸಮಿತಿ ಪರಶುರಾಮಪುರ ಹೋಬಳಿಯನ್ನು ಹೊಸ ತಾಲ್ಲೂಕನ್ನಾಗಿ ಪರಿಗಣಿಸಲು ಶಿಫಾರಸ್ಸು ಮಾಡಿದೆ. ಆದರೆ ಅದನ್ನು ಕಡೆಗಣಿಸಲಾಗಿದೆ. ತಾಲ್ಲೂಕಿನ ಜನರಿಗೆ ಆಡಳಿತಾತ್ಮಕ ಸಮಸ್ಯೆಗಳಿವೆ. ಪರಶುರಾಮಪುರ ಹೋಬಳಿಯನ್ನು ತಾಲ್ಲೂಕನ್ನಾಗಿ ಘೋಷಣೆ ಮಾಡಬೇಕೆಂದು ಪಟ್ಟು ಹಿಡಿದರು.
ಮುಂದಿನ ದಿನಗಳಲ್ಲಿ ಪರಿಶೀಲಿಸುವ ಭರವಸೆ ಮೂಲಕ ಸಚಿವರು, ಶಾಸಕರನ್ನು ಸಮಾಧಾನಪಡಿಸಿದರು.
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…
ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…