ರಾಜ್ಯ

ಒಮ್ಮೊಮ್ಮೆ ಗುಲಾಮಿತನ ಅನ್ನಿಸಿ ಬಿಡುತ್ತದೆ: ಸಂಗಣ್ಣ ಕರಡಿ ಅಸಮಾಧಾನ

ಕೊಪ್ಪಳ: ಸ್ವಪಕ್ಷದ ಬಗ್ಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅಸಮಾಧಾನ ಹೊರಹಾಕಿದ್ದು, ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಬಿಜೆಪಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಸಿ.ಸಿ. ಪಾಟೀಲ್, ಸಚಿವ ಗೋವಿಂದ ಕಾರಜೋಳ ಅವರಿದ್ದಾಗಲೂ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿಸಲು ಆಗಲಿಲ್ಲ” ಅಸಮಾಧಾನ ಹೊರಹಾಕಿದ್ದಾರೆ.

ನಾನು ಅಂದು ನನ್ನ ಸ್ವಾಭಿಮಾನಕ್ಕೆ‌ ಧಕ್ಕೆಯಾಗಿ ಹೊರ ಬರಬೇಕೆಂದಿದ್ದೆ. ಆದರೆ ಪಕ್ಷದ ಚೌಕಟ್ಟಿನಲ್ಲಿ ಇರಬೇಕಿದ್ದರಿಂದ ಅಲ್ಲೇ ಇದ್ದೆ. ಒಮ್ಮೊಮ್ಮೆ ಗುಲಾಮಿತನ ಎಂದು ಅನ್ನಿಸಿ ಬಿಡುತ್ತದೆ. ನಮ್ಮ ಜಿಲ್ಲೆಯಲ್ಲಿ ನನ್ನನ್ನೂ ಸೇರಿದಂತೆ ಒಬ್ಬರು ಡೈನಾಮಿಕ್​ ಲೀಡರ್ ಇಲ್ಲದೇ ಇರುವುದು ಜಿಲ್ಲೆಯ ಅಭಿವೃದ್ದಿಗೆ‌ ಹಿನ್ನಡೆ ಆಗಲು ಕಾರಣ ಎಂದು ಹೇಳಿದ್ದಾರೆ.

ಇನ್ನು ಸಂಗಣ್ಣ ಕರಡಿ ಅವರ ಈ ಹೇಳಿಕೆ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ. ಅವರು ಈ ಹಿಂದೆ ”ಸಂಸದರಿಗೆ ಟಿಕೆಟ್ ಇಲ್ಲ” ಎಂದು ಹೇಳಿದ್ದ ಸ್ವಪಕ್ಷದ ಶಾಸಕ ಯತ್ನಾಳ್‌ ವಿರುದ್ಧವೂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

andolanait

Recent Posts

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

27 mins ago

ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನ ಉದ್ಘಾಟನೆ : ಸಾವಿರಾರು ಮಂದಿ ದರ್ಶನ, ಕೊಂಡೋತ್ಸವದಲ್ಲಿ ಭಕ್ತಿಪರವಶ

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…

51 mins ago

ಬೆಂಗಳೂರು | ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ ಸವಾರ ಸಾವು

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…

1 hour ago

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

2 hours ago

ನಂಜನಗೂಡು ದೊಡ್ಡ ಜಾತ್ರೆಗೆ ಸಿದ್ಧತೆ : ಭಕ್ತರ ಸೌಕರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…

2 hours ago

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago