ಕೊಪ್ಪಳ: ಸ್ವಪಕ್ಷದ ಬಗ್ಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅಸಮಾಧಾನ ಹೊರಹಾಕಿದ್ದು, ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ.
ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಬಿಜೆಪಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಸಿ.ಸಿ. ಪಾಟೀಲ್, ಸಚಿವ ಗೋವಿಂದ ಕಾರಜೋಳ ಅವರಿದ್ದಾಗಲೂ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿಸಲು ಆಗಲಿಲ್ಲ” ಅಸಮಾಧಾನ ಹೊರಹಾಕಿದ್ದಾರೆ.
ನಾನು ಅಂದು ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿ ಹೊರ ಬರಬೇಕೆಂದಿದ್ದೆ. ಆದರೆ ಪಕ್ಷದ ಚೌಕಟ್ಟಿನಲ್ಲಿ ಇರಬೇಕಿದ್ದರಿಂದ ಅಲ್ಲೇ ಇದ್ದೆ. ಒಮ್ಮೊಮ್ಮೆ ಗುಲಾಮಿತನ ಎಂದು ಅನ್ನಿಸಿ ಬಿಡುತ್ತದೆ. ನಮ್ಮ ಜಿಲ್ಲೆಯಲ್ಲಿ ನನ್ನನ್ನೂ ಸೇರಿದಂತೆ ಒಬ್ಬರು ಡೈನಾಮಿಕ್ ಲೀಡರ್ ಇಲ್ಲದೇ ಇರುವುದು ಜಿಲ್ಲೆಯ ಅಭಿವೃದ್ದಿಗೆ ಹಿನ್ನಡೆ ಆಗಲು ಕಾರಣ ಎಂದು ಹೇಳಿದ್ದಾರೆ.
ಇನ್ನು ಸಂಗಣ್ಣ ಕರಡಿ ಅವರ ಈ ಹೇಳಿಕೆ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ. ಅವರು ಈ ಹಿಂದೆ ”ಸಂಸದರಿಗೆ ಟಿಕೆಟ್ ಇಲ್ಲ” ಎಂದು ಹೇಳಿದ್ದ ಸ್ವಪಕ್ಷದ ಶಾಸಕ ಯತ್ನಾಳ್ ವಿರುದ್ಧವೂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…