Mysore
22
scattered clouds

Social Media

ಬುಧವಾರ, 26 ಆಗಸ್ಟ್ 2026
Light
Dark

ರಾಜ್ಯದಲ್ಲಿ ಗೋವುಗಳ ಮೇಲಿನ ದಾಳಿಗೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಖಂಡನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗೋವುಗಳ ಮೇಲೆ ದಾಳಿ ನಡೆಯುತ್ತಿದ್ದು, ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲೊಡ್ಡುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ಅವರು, ರಾಜ್ಯದಲ್ಲಿ ಹಿಂದುಗಳ ಭಾವನೆಗಳನ್ನು ಕೆರಳಿಸಲು ಹಾಗೂ ಘಾಸಿಗೊಳಿಸುವ ಉದ್ದೇಶದಿಂದ ಮತಾಂಧ ಶಕ್ತಿಗಳು ಗೋವುಗಳ ಮೇಲೆ ದಾಳಿ ನಡೆಸುತ್ತಿವೆ.

ಇಷ್ಟೆಲ್ಲಾ ಘಟನೆಗಳಾದರೂ ರಾಜ್ಯ ಸರ್ಕಾರ ಮಾತ್ರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯನವರೇ ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ದಾಳಿಗಳು ದೊಡ್ಡ ಪಿತೂರಿಯನ್ನು ಸೂಚಿಸುತ್ತಿವೆ. ಇದು ಮತಾಂಧ ಮತ್ತು ಮೂಲಭೂತವಾದಿ ಶಕ್ತಿಗಳನ್ನು ಒಳಗೊಂಡಿರುವ ಪ್ರಮುಖ ಜಿಹಾದಿ ಸಂಚು ಎಂದು ತೋರುತ್ತದೆ ಎಂದು ಕಿಡಿಕಾರಿದರು.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ್ದು, ಕಾರವಾರದ ಹೊನ್ನಾವರ ತಾಲ್ಲೂಕಿನ ಸಾಲಕೋಡ ಗ್ರಾಮದಲ್ಲಿ ಗರ್ಭಿಣಿ ಹಸುವನ್ನು ಕೊಂದು ಹಾಕಿದ್ದಾರೆ. ಕರುವನ್ನು ಹೊರತೆಗೆದು ಬಿಸಾಡಿ ಮಾಂಸ ಕೊಂಡೊಯ್ದಿದ್ದಾರೆ. ಇಷ್ಟೆಲ್ಲಾ ಘಟನೆಗಳಾದರೂ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಏನನ್ನೂ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು.

 

 

Tags:
error: Content is protected !!