ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗೋವುಗಳ ಮೇಲೆ ದಾಳಿ ನಡೆಯುತ್ತಿದ್ದು, ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲೊಡ್ಡುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಹಿಂದುಗಳ ಭಾವನೆಗಳನ್ನು ಕೆರಳಿಸಲು ಹಾಗೂ ಘಾಸಿಗೊಳಿಸುವ ಉದ್ದೇಶದಿಂದ ಮತಾಂಧ ಶಕ್ತಿಗಳು ಗೋವುಗಳ ಮೇಲೆ ದಾಳಿ ನಡೆಸುತ್ತಿವೆ.
ಇಷ್ಟೆಲ್ಲಾ ಘಟನೆಗಳಾದರೂ ರಾಜ್ಯ ಸರ್ಕಾರ ಮಾತ್ರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಿಎಂ ಸಿದ್ದರಾಮಯ್ಯನವರೇ ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ದಾಳಿಗಳು ದೊಡ್ಡ ಪಿತೂರಿಯನ್ನು ಸೂಚಿಸುತ್ತಿವೆ. ಇದು ಮತಾಂಧ ಮತ್ತು ಮೂಲಭೂತವಾದಿ ಶಕ್ತಿಗಳನ್ನು ಒಳಗೊಂಡಿರುವ ಪ್ರಮುಖ ಜಿಹಾದಿ ಸಂಚು ಎಂದು ತೋರುತ್ತದೆ ಎಂದು ಕಿಡಿಕಾರಿದರು.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ್ದು, ಕಾರವಾರದ ಹೊನ್ನಾವರ ತಾಲ್ಲೂಕಿನ ಸಾಲಕೋಡ ಗ್ರಾಮದಲ್ಲಿ ಗರ್ಭಿಣಿ ಹಸುವನ್ನು ಕೊಂದು ಹಾಕಿದ್ದಾರೆ. ಕರುವನ್ನು ಹೊರತೆಗೆದು ಬಿಸಾಡಿ ಮಾಂಸ ಕೊಂಡೊಯ್ದಿದ್ದಾರೆ. ಇಷ್ಟೆಲ್ಲಾ ಘಟನೆಗಳಾದರೂ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಏನನ್ನೂ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು.
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…