ಬೆಳಗಾವಿ: ರೈಲಿನಲ್ಲಿ ಟಿಕೆಟ್ ಪರಿಶೀಲನೆ ವೇಳೆ ಟಿಕೆಟ್ ತೋರಿಸಿ ಎಂದಿದ್ದಕೆ ಟಿಸಿ ಸೇರಿ ಐವರ ಮೇಲೆ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.
ಈ ಘಟನೆ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದ್ದು, ಘಟನೆ ಸಂಭವಿಸುವಾಗ ರೈಲು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡ ಬಳಿ ಚಲಿಸುತ್ತಿತ್ತು.
ಪಾಂಡಿಚೇರಿಯಿಂದ ಮುಂಬಯಿ ಮಾರ್ಗವಾಗಿ ಚಲಿಸುತ್ತಿದ್ದ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನ ಎಸ್ 8 ಬೋಗಿಯಲ್ಲಿ ಇದ್ದ ಪ್ರಯಾಣಿಕನ ಬಳಿ ಟಿಸಿ ಟಿಕೆಟ್ ಕೇಳಿದ್ದಾರೆ. ಟಿಕೆಟ್ ತೋರಿಸದ ಪ್ರಯಾಣಿಕ ಟಿಸಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಹಲ್ಲೆ ತಡೆಯಲು ಹೋಗಿದ್ದ ಕೋಚ್ ಅಟೆಂಡರ್‌ಗೆ ಪ್ರಯಾಣಿಕ ಮನಸೋ ಇಚ್ಚೆ ಚಾಕು ಇರಿದಿದ್ದಾನೆ. ಆಸ್ಪತ್ರೆ ಸೇರಿಸಿದರು ಚಿಕಿತ್ಸೆ ಫಲಿಸದೇ ಕೋಚ್ ಅಟೆಂಡರ್ ಕೊನೆಯುಸಿರೆಳೆದಿದ್ದಾರೆ. ಇನ್ನು ಟಿಸಿ ಸೇರಿದಂತೆ ಉಳಿದ ಮೂವರು ಕೂಡ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆಯುತ್ತಿದೆ.
ಘಟನೆ ಬಳಿಕ ಆರೋಪಿಗಳು ರೈಲಿನಿಂದ ಜಿಗಿದು ಪರಾರಿಯಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…
ಪಾಲ್ಘಾರ್: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ…
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ…
ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…