MUDA case surpeme court verdict : CM Siddaramaiah reacts
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಅಸ್ಥಿಪಂಜರ ಶೋಧ ಕಾರ್ಯಾಚರಣೆ ಸ್ಥಳದ ಸಮೀಪ ಹಲ್ಲೆ ನಡೆಸಲಾಗಿದೆ. ನೇತ್ರಾವತಿಯ ಪಾಂಗಳ ಬಳಿ ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ. ಸುಳ್ಳು ವರದಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಾರೆ.
ಅಜಯ್, ಅಭಿಷೇಕ್, ಸಂತೋಷ್ ಎಂಬುವವರ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಲಾಗಿದೆ. ಕ್ಯಾಮರಾ ಕಸಿದುಕೊಂಡು ಹಾನಿ ಮಾಡಲಾಗಿದೆ ಎನ್ನಲಾಗಿದ್ದು, ಈ ವೇಳೆ ಪರಿಸ್ಥಿತಿ ಕೈ ಮೀರಿದೆ.
ಯುವಕರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದ್ದು, ಭಾರೀ ಸಂಖ್ಯೆಯ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಹಲ್ಲೆಗೊಳಗಾದ ಯುವಕರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಕಾನೂನು ಎಲ್ಲರಿಗೂ ಒಂದೇ, ಯಾರೇ ತಪ್ಪು ಮಾಡಿದರೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇನ್ನು ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಳೆ ಪ್ರತಿಭಟನೆ ನಡೆಸಲು ನಾವು ಸಿದ್ಧರಿದ್ದೇವೆ. ನಾಳೆ ಪ್ರತಿಭಟನೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…