ಬೆಂಗಳೂರು: ಇಥಿಯೋಪಿಯಾದಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಕೊಕೆನ್‌ನ್ನು ಕ್ಯಾಪ್ಸುಲ್‌ಗಳ ರೂಪದಲ್ಲಿ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಸಿಕ್ಕಿಬಿದ್ದಿದ್ದಾನೆ. ಸಿನಿಮೀಯ ರೀತಿಯಲ್ಲಿ 20 ಕೋಟಿ ರೂ. ಮೌಲ್ಯದ 2 ಕೆಜಿ ಕೊಕೇನ್ ಕ್ಯಾಪ್ಸೂಲ್‍ಗಳನ್ನು ನುಂಗಿಕೊಂಡು ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ಅಡಿಸ್ ಅಬಾಬಾದಿಂದ ಇಥಿಯೋಪಿಯಾ ಏರ್ಲೈನ್ಸ್‌ನಲ್ಲಿ ಬಂದಿದ್ದ. ಆತನ ಹೊಟ್ಟೆಯಲ್ಲಿ ಸುಮಾರು 50ಕ್ಕೂ ಹೆಚ್ಚಿನ ಕೊಕೇನ್ ಕ್ಯಾಪ್ಸೂಲ್ಸ್ ಪತ್ತೆಯಾಗಿವೆ. ಕ್ಯಾಪ್ಸೂಲ್‍ಗಳಲ್ಲಿ ಕೊಕೇನ್ ತುಂಬಿ ಅದನ್ನು ಆರೋಪಿ ನುಂಗಿಕೊಂಡು ಸಾಗಿಸುತ್ತಿದ್ದ. ಬಳಿಕ ಆತನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿ, ಹೊಟ್ಟೆಯಲ್ಲಿದ್ದ ಕ್ಯಾಪ್ಸೂಲ್‍ಗಳನ್ನು ವೈದ್ಯರು ಹೊರಗೆ ತೆಗೆದಿದ್ದಾರೆ.
ಆರೋಪಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಆತನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…