ರಾಜ್ಯ

ನಕ್ಸಲರಿಗೆ ಶರಣಾಗುವುದೊಂದೇ ದಾರಿ: ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಜಿಪಿ ಪ್ರಣವ್‌ ಮೊಹಂತಿ ಅವರಿಂದು ನನ್ನನ್ನು ಭೇಟಿಯಾಗಿದ್ದರು. ನಕ್ಸಲರ ಶರಣಾಗುವ ಬಗ್ಗೆ ಮಾತನಾಡಲು ನನ್ನ ಬಳಿಗೆ ಬಂದಿದ್ದರು. ಅವರಿಗೆ ಕೆಲವು ಸೂಚನೆಗಳನ್ನು ನೀಡಿದ್ದೇನೆ ಎಂದು ಮಾಹಿತಿ ನೀಡಿದರು.

ನಕ್ಸಲರನ್ನು ಶರಣಾಗತಿ ಮಾಡಿಸುವುದೇ ಉತ್ತಮ. ಅವರು ಗುಂಡು ಹಾರಿಸುತ್ತಾರೆ. ನಮ್ಮವರು ಗುಂಡು ಹಾರಿಸುತ್ತಾರೆ. ಅದನ್ನು ಬದಿಗಿಟ್ಟು ಶರಣಾಗಲು ಈಗಾಗಲೇ ಮುಕ್ತ ಆಹ್ವಾನ ನೀಡಿದ್ದೇವೆ ಎಂದರು.

ಇನ್ನು ಕಲಬುರ್ಗಿ ಜೈಲಿನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಇದರಲ್ಲಿ ಜೈಲರ್‌ ಹಾಗೂ ಅಧಿಕಾರಿಗಳ ತಪ್ಪಿದ್ದರೆ ಅವರ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದು ಖಚಿತ ಎಂದು ಸೂಚನೆ ನೀಡಿದರು.

ಇನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಕುರಿತಂತೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳಿವೆ. ಅದರ ಬಗ್ಗೆ ಚರ್ಚಿಸಿ, ಬಗೆಹರಿಸುವುದು ಈ ಅಧಿವೇಶನದ ಉದ್ದೇಶ. ಬಿಜೆಪಿಯವರು ಹೋರಾಟ ಮಾಡಲಿ, ಬೇಡ ಎನ್ನುವುದಿಲ್ಲ. ಆ ಭಾಗದ ಜನರ ಸಮಸ್ಯೆ ಕುರಿತು ಹೆಚ್ಚು ಚರ್ಚೆ ನಡೆಸಲಿ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

12 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

12 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

18 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

18 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

18 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

18 hours ago