ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಹೀಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಹೀಗಾಗಿ, ರೊಚ್ಚಿಗೆದ್ದ ಸಿದ್ದರಾಮಯ್ಯ ಬೆಂಬಲಿಗರು ನಿನ್ನೆ(ಆ.18) ಸಹ ಹೋರಾಟ ನಡೆಸಿದ್ದರು.
ಇನ್ನು ಇಂದು(ಆ.19) ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಮಾಡಲು ನಿರ್ಧರಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾಪಾಲರ ವಿರುದ್ದ ಬೀದಿಗಿಳಿಯಲಿದ್ದಾರೆ. ಹೀಗಾಗಿ ವಾಹನ ಸವಾರರಿಗೆ ಪ್ರತಿಭಟನೆಯ ಬಿಸಿ ತಟ್ಟಲಿದೆ.
ಬೆಂಗಳೂರು, ಸಿಎಂ ತವರೂರು ಮೈಸೂರು ಸೇರಿದಂತೆ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆಯ ಕಾವು ಹೆಚ್ಚಲಿದೆ. ಕಾಂಗ್ರೆಸ್ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಕೂಡ ಬೆಂಬಲ ನೀಡಿವೆ. ಅಹಿಂದ ಸಂಘಟನೆಗಳು ಕೂಡ ಮೈಸೂರಲ್ಲಿ ಪ್ರತಿಭಟನೆಯ ಕಾವು ಹೆಚ್ಚಿಸಲಿವೆ.





