ರಾಜ್ಯ

ವಾಹನ ಸವಾರರ ಗಮನಕ್ಕೆ: ಇಂದು ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಹೀಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಹೀಗಾಗಿ, ರೊಚ್ಚಿಗೆದ್ದ ಸಿದ್ದರಾಮಯ್ಯ ಬೆಂಬಲಿಗರು ನಿನ್ನೆ(ಆ.18) ಸಹ ಹೋರಾಟ ನಡೆಸಿದ್ದರು.

ಇನ್ನು ಇಂದು(ಆ.19) ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ ಮಾಡಲು ನಿರ್ಧರಿಸಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ರಾಜ್ಯಾಪಾಲರ ವಿರುದ್ದ ಬೀದಿಗಿಳಿಯಲಿದ್ದಾರೆ. ಹೀಗಾಗಿ ವಾಹನ ಸವಾರರಿಗೆ ಪ್ರತಿಭಟನೆಯ ಬಿಸಿ ತಟ್ಟಲಿದೆ.

ಬೆಂಗಳೂರು, ಸಿಎಂ ತವರೂರು ಮೈಸೂರು ಸೇರಿದಂತೆ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆಯ ಕಾವು ಹೆಚ್ಚಲಿದೆ. ಕಾಂಗ್ರೆಸ್‌ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಕೂಡ ಬೆಂಬಲ ನೀಡಿವೆ. ಅಹಿಂದ ಸಂಘಟನೆಗಳು ಕೂಡ ಮೈಸೂರಲ್ಲಿ ಪ್ರತಿಭಟನೆಯ ಕಾವು ಹೆಚ್ಚಿಸಲಿವೆ.

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

50 mins ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

2 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

4 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

5 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago