Mysore
24
overcast clouds

Social Media

ಮಂಗಳವಾರ, 24 ಜೂನ್ 2025
Light
Dark

ಬುಕ್ಕಿಂಗ್ ರದ್ದು ಪಡಿಸಿದಕ್ಕೆ ಯುವತಿಗೆ ನಿಂದಿಸಿದ್ದ‌ ಆಟೋ ಚಾಲಕ ಸೆರೆ

ಬೆಂಗಳೂರು: ಬುಕ್ ಮಾಡಿದ್ದ ಓಲಾ ಆಟೋ ರದ್ದು ಪಡಿಸಿದ್ದಕ್ಕೆ ಆಕ್ರೋಶಗೊಂಡ ಆಟೋ ಚಾಲಕ ಯುವತಿಯನ್ನು ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಗರದಲ್ಲಿ ನಡೆದಿದ್ದು, ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ.

ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2ರಂದು ಯುವತಿ, ಓಲಾ ಆಟೋ ಬುಕ್ ಮಾಡಿದ್ದರು. ಸಕಾಲಕ್ಕೆ ಆಟೋ ಬಾರದ ಕಾರಣ ಮತ್ತೊಂದು ಆಟೋ ಬುಕ್ ಮಾಡಿದ್ದರು. ಮುಂಚಿತವಾಗಿ ಬಂದ ಆಟೋ ಹತ್ತಿ, ಈ ಹಿಂದೆ ಬುಕ್ ಮಾಡಿದ್ದ ಆರ್ಡರ್ ರದ್ದು ಮಾಡಿದ್ದರು. ಇದನ್ನು ಗಮನಿಸಿದ ಆಟೋ ಚಾಲಕ ಯುವತಿಯನ್ನು ಹಿಂಬಾಲಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದೇ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಯುವತಿಯ ಸ್ನೇಹಿತೆ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಪೋಸ್ಟ್​ ಮಾಡಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಪರಿಶೀಲಿಸಿದ ಪೊಲೀಸರು, ಆಟೋ ಚಾಲಕ ಮುತ್ತುರಾಜ್ ಎಂಬಾತನನ್ನು ಕರೆಯಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ, ಯುವತಿಗೂ ಪೊಲೀಸರು ನೋಟಿಸ್ ನೀಡಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಆಟೋ ಚಾಲಕನನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ. ಅಪರಾಧಕ್ಕಾಗಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಾಮಾಜಿಕ ಜಾಲತಾಣದ ಎಕ್ಸ್’ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

Tags:
error: Content is protected !!