ಬೆಂಗಳೂರು: ಬುಕ್ ಮಾಡಿದ್ದ ಓಲಾ ಆಟೋ ರದ್ದು ಪಡಿಸಿದ್ದಕ್ಕೆ ಆಕ್ರೋಶಗೊಂಡ ಆಟೋ ಚಾಲಕ ಯುವತಿಯನ್ನು ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಗರದಲ್ಲಿ ನಡೆದಿದ್ದು, ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ.
ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2ರಂದು ಯುವತಿ, ಓಲಾ ಆಟೋ ಬುಕ್ ಮಾಡಿದ್ದರು. ಸಕಾಲಕ್ಕೆ ಆಟೋ ಬಾರದ ಕಾರಣ ಮತ್ತೊಂದು ಆಟೋ ಬುಕ್ ಮಾಡಿದ್ದರು. ಮುಂಚಿತವಾಗಿ ಬಂದ ಆಟೋ ಹತ್ತಿ, ಈ ಹಿಂದೆ ಬುಕ್ ಮಾಡಿದ್ದ ಆರ್ಡರ್ ರದ್ದು ಮಾಡಿದ್ದರು. ಇದನ್ನು ಗಮನಿಸಿದ ಆಟೋ ಚಾಲಕ ಯುವತಿಯನ್ನು ಹಿಂಬಾಲಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದೇ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಯುವತಿಯ ಸ್ನೇಹಿತೆ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಪರಿಶೀಲಿಸಿದ ಪೊಲೀಸರು, ಆಟೋ ಚಾಲಕ ಮುತ್ತುರಾಜ್ ಎಂಬಾತನನ್ನು ಕರೆಯಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ, ಯುವತಿಗೂ ಪೊಲೀಸರು ನೋಟಿಸ್ ನೀಡಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ.
ಆಟೋ ಚಾಲಕನನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ. ಅಪರಾಧಕ್ಕಾಗಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಾಮಾಜಿಕ ಜಾಲತಾಣದ ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…