Mysore
29
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ಗ್ಯಾಸ್‌ ಸಿಗದೇ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ಆಕ್ರೋಶ

ಬೆಂಗಳೂರು: ಗ್ಯಾಸ್‌ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಕೂಡಲೇ ಕೇಂದ್ರ ಸರ್ಕಾರ ಸಮಸ್ಯೆಯತ್ತ ಗಮನ ಹರಿಸಲಿ. ನಮ್ಮ ಕೈಯಲ್ಲಿ ಏನೀಲ್ಲ ಎಲ್ಲಾ ಕೇಂದ್ರ ಸರ್ಕಾರವೇ ಕೊಡುವಂತಹದ್ದು ಎಂದು ಹೇಳಿದರು.

ಕೇಂದ್ರ ಸರ್ಕಾರ ಸರಿಯಾದ ರೀತಿ ನೀತಿ ರೂಪಿಸಬೇಕಿತ್ತು. ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ಆದರೆ ವಿಫಲ ಆಗುತ್ತಿದೆ. ಕೇಂದ್ರ ಸರ್ಕಾರದ ಬಗ್ಗೆ ಬಿಜೆಪಿ ಯಾಕೆ ಮಾತನಾಡುತ್ತಿಲ್ಲ. ಬಿಜೆಪಿ ಅವರು ಹೇಳಬೇಕಿತ್ತು. ನಮ್ಮಿಂದ ತೊಂದರೆ ಆಗಿದೆ. ನಮ್ಮನ್ನು ಕ್ಷಮಿಸಬೇಕು ಎಂದು ಅವರು ಹೇಳಬೇಕು. ಆದರೆ ಅವರು ಮಾಡಿರುವ ತೊಂದರೆ ಮುಚ್ಚಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

 

Tags:
error: Content is protected !!