ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಹಲವಾರು ಖಾಸಗಿ ಆಟೋ ಎಲ್‌ಪಿಜಿ ಔಟ್‌ಲೆಟ್‌ಗಳಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿದೆ.
ಈ ಬೆನ್ನಲ್ಲೆ, ಇದನ್ನು ಪರಿಹರಿಸಲು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಇಂಡಿಯನ್ ಆಯಿಲ್) ಮುಂದಾಗಿದ್ದು,ರಾಜ್ಯದಾದ್ಯಂತ ತನ್ನ ಆಟೋ ಎಲ್‌ಪಿಜಿ ಸರಬರಾಜನ್ನು ಗಮನಾರ್ಹವಾಗಿ ಹೆಚ್ಚಿಸಿದೆ.
ಚೆನ್ನೈನ ದಕ್ಷಿಣ ಪ್ರಾದೇಶಿಕ ಕಚೇರಿಯ ಇಂಡಿಯನ್ ಆಯಿಲ್‌ನ ಮುಖ್ಯ ಮಹಾಪ್ರಬಂಧಕ ವಿ. ವೆಟ್ರಿಸೆಲ್ವಕುಮಾರ್ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ, ಆಟೋ LPG ವಿತರಣಾ ಕೇಂದ್ರಗಳ ಮೂಲಕ ಆಟೋ ರಿಕ್ಷಾಗಳು ಮತ್ತು ಎಲ್‌ಪಿಜಿ ಚಾಲಿತ ಕಾರುಗಳ ಇಂಧನ ಅವಶ್ಯಕತೆಗಳನ್ನು ಪೂರೈಸುತ್ತಿದೆ. tನ್ನ ಮೂಲಸೌಕರ್ಯದ ಮೇಲೆ ಹೆಚ್ಚು ಒತ್ತು ನೀಡಿ ಬೇಡಿಕೆಯನ್ನು ಪೂರೈಸಲು ಇಂಡಿಯನ್ ಆಯಿಲ್ ಮುಂದಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಇಂಡಿಯನ್ ಆಯಿಲ್‌ನ ಆಟೋ LPG ವಿತರಣಾ ಕೇಂದ್ರಗಳಲ್ಲಿ ಸರಾಸರಿ ದೈನಂದಿನ ಮಾರಾಟವು 59.53 ಮೆಟ್ರಿಕ್ ಟನ್‌ಗಳಿಗೆ ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಸಂಸ್ಥೆಯು ರಾಜ್ಯದ ಎಲ್ಲಾ ಆಟೋ LPG ಕೇಂದ್ರಗಳಲ್ಲಿ ಸುಗಮ ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದು, ಆಟೋ ರಿಕ್ಷಾ ಚಾಲಕರು ಮತ್ತು LPG ವಾಹನ ಬಳಕೆದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…