ರಾಜ್ಯ

ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ನೋಡಿಕೊಳ್ಳಿ: ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಸೃಷ್ಟಿಯಾಗಿರುವ ಬರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರದ ಅನುದಾನದ ಹೊರತಾಗಿಯೂ ರಾಜ್ಯ ಸರ್ಕಾರ ಮುಂದಾಗಿದ್ದು, ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ರೂ.ಗೂ ಹೆಚ್ಚು ಅನುದಾನ ನೀಡಿದೆ. ಯಾವುದೇ ಭಾಗದಲ್ಲಿ ಸಮಸ್ಯೆಯಾಗದಂತೆ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದೆ. ಮಳೆ ಕೊರತೆಯಿಂದಾಗಿ ಜಲಮೂಲಗಳು ಬತ್ತಿದ್ದು, ಹಾಹಾಕಾರ ಹೆಚ್ಚಾಗಿದೆ. ಸುಮಾರು ಸಾವಿರಕ್ಕೂ ಹೆಚ್ಚು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕಾದಂತಹ ಪರಿಸ್ಥಿತಿ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ಸರ್ಕಾರ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಯಲ್ಲಿ ಸಾಕಷ್ಟು ಹಣ ಲಭ್ಯವಿದೆ. ಜೊತೆಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಗೆ ತಲಾ ಒಂದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಅದರ ಹೊರತಾಗಿಯೂ ಅನುದಾನದ ಕೊರತೆ ಎಂದು ಹಲವು ಕಡೆ ಆಕ್ಷೇಪಗಳು ಕೇಳಿಬರುತ್ತಲೇ ಇವೆ. ರಾಜ್ಯ ಸರ್ಕಾರ ಪಂಚ ಖಾತ್ರಿ ಯೋಜನೆಗಳಿಗೆ ಹಣ ಬಳಕೆ ಮಾಡಿ ಕುಡಿಯುವ ನೀರಿಗೆ ಸಂಕಷ್ಟದ ಸ್ಥಿತಿ ನಿರ್ಮಿಸಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ.

ಬಿಜೆಪಿ ಹಲವಾರು ತಂಡಗಳನ್ನು ರಚಿಸಿಕೊಂಡು ಬರ ಅಧ್ಯಯನಕ್ಕೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಅಗತ್ಯವಿರುವ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬರಗಾಲ ಮತ್ತು ಅದರ ಪರಿಣಾಮಗಳ ಬಗ್ಗೆ ತೀವ್ರ ನಿಗಾ ಇಡಬೇಕು. ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು, ನರೇಗಾ ಯೋಜನೆಯಡಿ ಕೇಂದ್ರದಿಂದ ಆರ್ಥಿಕ ನೆರವು ದೊರೆಯುವುದು ವಿಳಂಬವಾದರೂ ಕೂಡ ರಾಜ್ಯದ ಬೊಕ್ಕಸದಿಂದಲೇ ಉದ್ಯೋಗ ಸೃಷ್ಟಿಗೆ ಹಣ ನೀಡಬೇಕು. ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ಕಾರಣಕ್ಕೂ ತಡೆ ನೀಡಬಾರದು ಎಂದು ಕಟ್ಟಪ್ಪಣೆ ಮಾಡಿದ್ದಾರೆ.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago