ಮೈಸೂರಿನ ಇಬ್ಬರು ಪತ್ರಕರ್ತರಿಗೆ ಪ್ರಶಸ್ತಿ

ಮೈಸೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಸಕ್ತ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು ಮೈಸೂರಿನ ಇಬ್ಬರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅತ್ಯುತ್ತಮ ಕ್ರೀಡಾ ವರದಿಗೆ ನೀಡುವ ಕೆ.ಎ.ನೆಟ್ಟಕಲಪ್ಪ ಪ್ರಶಸ್ತಿ ಮೈಸೂರಿನ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾರ ಕೆ.ಕೆ.ಕಾರ್ತಿಕ್ ಅವರಿಗೆ ಲಭಿಸಿದೆ.

ವನ್ಯಪ್ರಾಣಿಗಳ ಕುರಿತ ಅತ್ಯುತ್ತಮ ಲೇಖನಕ್ಕೆ ನೀಡುವ ಆರ್.ಎಲ್. ವಾಸುದೇವರಾವ್ ಪ್ರಶಸ್ತಿ ಹುಣಸೂರು ತಾಲೂಕು ವಿಜಯವಾಣಿ ವರದಿಗಾರ ಶಿವು ಹುಣಸೂರು ಅವರಿಗೆ ಲಭಿಸಿದೆ. ಪ್ರಶಸ್ತಿ ವಿಜೇತ ಇಬ್ಬರು ಪತ್ರಕರ್ತರಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಅಭಿನಂದನೆ ಸಲ್ಲಿಸುತ್ತದೆ.

× Chat with us