ರಾಜ್ಯ

ಒಳ ಮೀಸಲಾತಿ ಕುರಿತು ಜಾಗೃತಿ ಮೂಡಿಸಬೇಕಿದೆ: ಆನೇಕಲ್ ನಾರಾಯಣಸ್ವಾಮಿ

ಬೆಂಗಳೂರು: ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತು ನೀಡಿರುವ ತೀರ್ಪು ರಾಜ್ಯ ಸರ್ಕಾರದ ಮಟ್ಟದಲ್ಲಿ ಅನುಷ್ಠಾನಗೊಳ್ಳುವವರೆಗೂ ಯಾವುದೇ ಹುದ್ದೆಗಳ ನೇಮಕಾತಿ ಆದೇಶ ಮತ್ತು ಈಗಾಗಲೇ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಮಾದಿಗ ಸಮುದಾಯ ಮತ್ತು ಒಳ ಪಂಗಡಗಳ ಸಮುದಾಯ ಒತ್ತಾಯಿಸಿದೆ.

ಬೆಂಗಳೂರಿನ ಗಾಂಧಿ ಭವನದಲ್ಲಿಂದು (ಆಗಸ್ಟ್ 19) ಮಾದಿಗ ಪೊಲಿಟಿಕಲ್ ಪೋರಂ, ಶೂದ್ರ ಪ್ರತಿಷ್ಠಾನವತಿಯಿಂದ ನಡೆದ ಐತಿಹಾಸಿಕವಾದ ಒಳ ಮೀಸಲಾತಿ ತೀರ್ಪು ಕುರಿತ ಒಂದು ಮುನ್ನೋಟ ಕುರಿತ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ನ ತೀರ್ಪುನಿಂದ ಅನೇಕ ಸಮಯದಾಯಗಳಿಗೆ ಸುದೀರ್ಘ ಹೋರಾಟದ ಜಯವಾಗಿದೆ, ಬೆಳಗಾವಿ ಮತ್ತು ಹುಬ್ಬಳಿಯಲ್ಲಿ ನಡೆದ ನಡೆದ ಬಹುದೊಡ್ಡ ಸಮಾವೇಶ, ಅನೇಕ ಮುಖಂಡರ ಹೋರಾಟದ ಪ್ರತಿಫಲವಾಗಿ ಒಳ ಮೀಸಲಾತಿ ಜಾರಿಗೆ ಕಾಲ ಕೂಡಿ ಬಂದಿದೆ ಇದರ ಜಾರಿಗಾಗಿ ಮಾದಿಗ ಸೇರಿದಂತೆ ಎಲ್ಲ ಸಮುದಾಯಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಇದರ ಜಾರಿಗೆ ನಾನೇ ನೇತೃತ್ವ ವಹಿಸುತ್ತೇನೆ ಎಂದು ಹೇಳಿದರು.

ಮಾಜಿ ಕೇಂದ್ರ ಸಚಿವ ಆನೇಕಲ್ ನಾರಾಯಣಸ್ವಾಮಿ ಮಾತನಾಡಿ, ಒಳ ಮೀಸಲಾತಿ ಕುರಿತಂತೆ ರಾಜ್ಯದ ಮಾದಿಗ ಸೇರಿದಂತೆ ಕೆಳ ಸಮುದಾಯಗಳಿಗೆ ಅರಿವು ಮೂಡಿಸುವ ಅಗತ್ಯವಾಗಿದೆ, ಇದುವರೆಗೂ ಒಳ ಮೀಸಲಾತಿ ಕುರಿತು ಬಹುತೇಕ ಜನರಿಗೆ ಸರಿಯಾದ ಅರಿವು ಇಲ್ಲ, ಒಳ ಮೀಸಲಾತಿ ತೀರ್ಪು ಕುರಿತು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಲಾಗುವುದು ಎಂದು ಹೇಳಿದರು.

ಒಳ ಮೀಸಲಾತಿ ಕುರಿತಂತೆ ಕೇಂದ್ರದ ಪ್ರಮುಖ ಮುಖಂಡರನ್ನು ಬೇಟಿಯಾಗಲು ತೆರಳಿದ ಸಂದರ್ಭದಲ್ಲಿ ನಮ್ಮ ಕುಳಿತು ಕೊಳ್ಳಲು ಕುರ್ಚಿ ಕೊಡದೇ ಅವಮಾನ ಮಾಡಿದರು,341ನೇ ವಿಧಿ ಇದಕ್ಕೆ ಸಂಬಂದಿಸುವುದಿಲ್ಲ ಎಂದು ಉತ್ತರ ನೀಡಿದರು ಇದನ್ನು ಸವಾಲಾಗಿ ಸ್ವೀಕರಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿ ಸೂಕ್ತ ನ್ಯಾಯ ಪಡೆದಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಧರ್ಮಸೇನಾ,ಒಳ ಮೀಸಲಾತಿ ಹೋರಾಟಗಾರರಾದ ಗಡಂ ವೆಂಕಟೇಶ್, ಪಿ.ಮೂರ್ತಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಗೋನಾಳ್ ಬೀಮಪ್ಪ, ಲಕ್ಷ್ಮೀ ನಾರಾಯಣಸ್ವಾಮಿ, ಆದಿ ಜಾಂಬವ ಸಮುದಾಯದ ಡಾ.ಬೀಮರಾಜು, ಸಿದ್ಧರಾಜು  ಮತ್ತಿತರರು ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

6 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

6 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

6 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

6 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

9 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

9 hours ago