ರಾಜ್ಯ

ಆರೋಪಿ ದರ್ಶನ್‌ ಜಾಮೀನು ರದ್ಧತಿ ಕೋರಿ ಶೀಘ್ರವೇ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ: ಬಿ.ದಯಾನಂದ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿರುವ ಆದೇಶವನ್ನು ಪ್ರಶ್ನಿಸಿ ಶೀಘ್ರವೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಡಿಸೆಂಬರ್‌.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬೆಂಗಳೂರು ಪೊಲೀಸರು ಜಾಮೀನು ಆದೇಶವನ್ನು ಪ್ರಶ್ನಿಸಲು ಸಿದ್ಧತೆ ನಡೆಸುತ್ತಿದ್ದು, ಶೀಘ್ರವೇ ದರ್ಶನ್ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಹೈಕೋರ್ಟ್‌ನ ಏಕಸದಸ್ಯ ಪೀಠದಿಂದ ಆರೋಪಿ ದರ್ಶನ್‌ಗೆ ಅನಾರೋಗ್ಯ ವಿಚಾರವಾಗಿ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಈ ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಗೃಹ ಸಚಿವಾಲಯದಿಂದ ಅನುಮತಿ ಪಡೆಯಲಾಗಿತ್ತು. ಅದಕ್ಕೆ ಸಚಿವಾಲಯದಿಂದ ಅನುಮತಿ ನೀಡಿದ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸರು ಚಾರ್ಜ್‌ಶೀಟ್‌ ಪ್ರತಿಗಳನ್ನು ಕನ್ನಡದಿಂದ ಇಂಗ್ಲೀಷ್‌ಗೆ ಭಾಷಾಂತರ ಮಾಡುವ ಪ್ರಕ್ರಿಯೆ ನಡೆಸುತ್ತಿದ್ದರು. ಆದರೆ ಈಗ ಎಲ್ಲಾ ಪ್ರಕ್ರಿಯೆಗಳು ಮುಗಿದಿವೆ ಎಂದು ಹೇಳಿದ್ದಾರೆ.

ಸುಪ್ರೀಂಕೋರ್ಟ್‌ಗೆ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಮೊದಲೇ ಹೈಕೋರ್ಟ್‌ನಿಂದ ರೆಗ್ಯುಲರ್‌ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಬೆಂಗಳೂರು ನಗರ ಪೊಲೀಸರು ಇವೆರಡೂ ವಿಚಾರದ ಜಾಮೀನು ಆದೇಶವನ್ನು ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

52 mins ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

1 hour ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

2 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

3 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

4 hours ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

4 hours ago