ಬೆಂಗಳೂರು: ಕನ್ನಡ ಪರ ಸಂಘಟನೆಗಳು ನಾಳೆ ಎಂಇಎಸ್ ನಿಷೇಧಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಬಂದ್ ನಡೆಸುವ ವೇಳೆ ಬಲವಂತವಾಗಿ ಯಾವುದನ್ನು ಬಂದ್ ಮಾಡಿಸುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೋಲಿಸ್ ಇಲಾಖೆ ವತಿಯಿಂದ ಈಗಾಗಲೇ ಶನಿವಾರದ ಕರ್ನಾಟಕ ಬಂದ್‌ಗೆ ಭದ್ರತಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಅಲ್ಲದೇ ಕೆಲ ಕನ್ನಡಪರ ಸಂಘಟನೆಗಳು ಬಂದ್ ಬಗ್ಗೆ ಘೋಷಣೆ ಮಾಡಿವೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಭದ್ರತೆ ಕ್ರಮವಹಿಸಲಾಗುತ್ತದೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಯಾವುದೇ ರೀತಿ ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ. ಆದರೆ ಕೋರ್ಟ್ ಆದೇಶದಂತೆ ಬಂದ್ ನಡೆಯುವ ವೇಳೆ ಅಗತ್ಯ ಭದ್ರತೆ ನೀಡಲಾಗುವುದು ಎಂದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…