ರಾಜ್ಯ

ಪಕ್ಷದಲ್ಲಿ ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು: ಬಿ.ಕೆ.ಹರಿಪ್ರಸಾದ್‌

ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಸಚಿವ ಸ್ಥಾನಗಳ ಬದಲಾವಣೆ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸಬೇಕು. ಆದರೆ ಪಕ್ಷದ ಹೈಕಮಾಂಡ್‌ ಕಲಬುರಗಯಲ್ಲೇ ಇರುವುದರಿಂದ ಎಲ್ಲವನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಇಂದು(ಫೆಬ್ರವರಿ.16) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ಇಲ್ಲಿಯವರೇ ಆಗಿರುವುದರಿಂದ ಎಲ್ಲವೂ ಅವರಿಗೆ ಮಾತ್ರ ಗೊತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ರೀತಿಯ ಚರ್ಚೆಗಳು ನಡೆಯುತ್ತಲೇ ಇವೆ. ಈ ಎಲ್ಲಾ ವಿಚಾರಗಳು ರಾಜಕೀಯದಲ್ಲಿ ಸಹಜ. ಆದರೆ ಸ್ವಾಮೀಜಿಗಳು ಎನಿಸಿಕೊಂಡಿರುವವರು ರಾಜಕೀಯ ಮಾತನಾಡಬಾದು. ಅದರಲ್ಲೂ ನನ್ನ ವಿಚಾರದಲ್ಲಿ ಯಾವ ಶ್ರೀಗಳು ಕೂಡ ಮಾತಾಡಬಾರದು ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ವಿಜಯಪುರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ ವ್ಯಕ್ತಿ ಆರ್‌ಎಸ್‌ಎಸ್‌ಗೆ ಸೇರಿದವನು

ವಿಜಯಪುರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ ವ್ಯಕ್ತಿ ಆರ್‌ಎಸ್‌ಎಸ್‌ಗೆ ಸೇರಿದವನು ಎಂಬುದು ಎಲ್ಲಇಗೂ ಗೊತ್ತಿದೆ. ಅವರೇ ಕೆಲ ಕಡೆಗಳಲ್ಲಿ ಬುರ್ಖಾ ಧರಸಿ ಗಲಭೆ ಮಾಡುತ್ತಾರೆ. ಆರ್‌ಎಸ್‌ಎಸ್‌ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಪಿತೃ ಪಕ್ಷ ಆಚರಣೆ ಹೆಸರಿನಲ್ಲಿ ಹೀಗೆಲ್ಲಾ ಮಾಡುತ್ತಾರೆ. ಅಲ್ಲದೇ ಮಾದರಿಯ ಚಿಂತನೆಗಳನ್ನು ಅನುಷ್ಠಾನಕ್ಕೆ ತರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಿಲ್ಲ. ಶಾಂತಿ ಕದಡುವ ಪ್ರಯತ್ನ ಅವರೇ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಯ ಗಲಭೆ ಕುರಿತು ಮಾತನಾಡಿದ ಅವರು, ಈ ಗಲಭೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕೃಪಾಪೋಷಿತ ಕೃತ್ಯವಾಗಿದೆ. ನಮ್ಮ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟ ಎನ್ನಲಾಗುತ್ತದೆ. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಆ ಶಾಂತಿಯನ್ನು ಕದಡಲು ಬಹಳ ಪ್ರಯತ್ನ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.

ಇನ್ನು ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣದಲ್ಲಿ ಶೇ.90ರಷ್ಟು ಎರಡೇ ತಿಂಗಳಲ್ಲಿ ಕಡಿಮೆಯಾಗಿದೆ. ಯಾರೇ ಆಗಲಿ, ಯಾವುದೇ ಧರ್ಮ, ಜಾತಿ, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಯತ್ನಕ್ಕೆ ಕೈ ಹಾಕಿದರೆ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯದ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

34 mins ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

42 mins ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

46 mins ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

1 hour ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

2 hours ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago