ರಾಜ್ಯ

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ ಎಲ್ಲಾ ಬಿ-ಖಾತಾಗಳಿಗೂ ಎ-ಖಾತಾ ನೀಡಲು ಒಪ್ಪಿಗೆ ಸೇರಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಕಾಂಗ್ರೆಸ್‌ ಭವನ ನಿರ್ಮಾಣಕ್ಕೆ ಭೂಮಿ ಮಂಜೂರು, ಚಾಮರಾಜನಗರ ಜಿಲ್ಲೆಯ ಹಾಗೂ ತಾಲ್ಲೂಕಿನ 166 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ 3 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯ ಕಾಮಗಾರಿಯನ್ನು ರೂ. 33.04 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ 131 ಗ್ರಾಮಗಳ ಹಾಗೂ ಮಾರ್ಗ ಮಧ್ಯದ 32 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ 3 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯ ಕಾಮಗಾರಿಯನ್ನು ರೂ. 27.38 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಸಂಪುಟ ಸಭೆಯ ಇತರ ನಿರ್ಣಯ ಹೀಗಿವೆ….
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL), ಬೆಂಗಳೂರು ಸಂಕೀರ್ಣಕ್ಕೆ ಸಾಬೂನು ತಯಾರಿಸುವ ಯಂತ್ರವನ್ನು ರೂ. 17.70 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ.

ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ 50 TPD Bio CNG ಘಟಕವನ್ನು ರೂ.24.96 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸುವ ಯೋಜನೆಯನ್ನು ಕೈಬಿಟ್ಟು, ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು GAIL ಸಂಸ್ಥೆಯವರು ಕೋಲಾರದಲ್ಲಿ ಸ್ಥಾಪಿಸುತ್ತಿರುವ 150 TPD CBG ಘಟಕಕ್ಕೆ ಪೂರೈಸುವ ಬಗ್ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕಲಬುರಗಿಯಲ್ಲಿ ನೂತನ ಮೆಗಾ ಡೈರಿಯನ್ನು ರೂ. 50.00 ಕೋಟಿಗಳ ಮೊತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಿಂದ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಕಲಬುರಗಿಯಲ್ಲಿ ರೂ.10.00 ಕೋಟಿಗಳ ಮೊತ್ತದಲ್ಲಿ ಪ್ರಾದೇಶಿಕ ಸಹಕಾರ ಭವನವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಿಂದ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

PM-ABHIM ಯೋಜನೆಯಡಿ 2024-2026ನೇ ಸಾಲಿನಲ್ಲಿ ರಾಜ್ಯಾದ್ಯಂತ 196 SC-AAM (Rural Health and Wellness Centre) ಗಳನ್ನು ರೂ. 127.40 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ದಿನಾಂಕ: 31.12.2025 ರಂದು ಸರ್ಕಾರಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.

ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 33 ಜೀವಾವಧಿ ಶಿಕ್ಷಾ ಬಂದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಪೈಕಿ ಇಬ್ಬರು ಶಿಕ್ಷಾ ಬಂದಿಗಳನ್ನು ಕೇಂದ್ರ ಗೃಹ ಮಂತ್ರಾಲಯದ ಸಹಮತಿ ದೊರಕಿದ ನಂತರ ಬಿಡುಗಡೆ ಮಾಡಲು ನಿರ್ಣಯ ಮಾಡಿದೆ.

ಬೆಂಗಳೂರಿನ ಜಯನಗರದಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ 2ನೇ ಹಂತದ ಕಟ್ಟಡ ಕಾಮಗಾರಿಯನ್ನು ರೂ.24.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.

ಹೊಳೆನರಸೀಪುರ ಪಟ್ಟಣದಲ್ಲಿ ತಾಲ್ಲೂಕು ಪಂಚಾಯಿತಿ ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿಯ ರೂ. 12.30 ಕೋಟಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಅನುಮೋದನೆ ನೀಡುವ ಬಗ್ಗೆ.

ಭಾರತಿ ಎಜುಕೇಷನ್ ಟ್ರಸ್ಟ್(ರಿ) ಇವರಿಗೆ ಮಂಜೂರು ಮಾಡಿರುವ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮೆಳ್ಳಹಳ್ಳಿ ಗ್ರಾಮದ 2.0.26 ರಲ್ಲಿ 17-06 ಎಕರೆ/ಗುಂಟೆ ಜಮೀನಿಗೆ ವಿಧಿಸಿರುವ ಮೊತ್ತವನ್ನು ಪರಿಷ್ಕರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ತುಮಕೂರು ಜಿಲ್ಲೆ, ಶಿರಾ ತಾಲ್ಲೂಕು, ಕಲ್ಲುಕೋಟೆ ಗ್ರಾಮದ ಸ.ನಂ.49 ರಲ್ಲಿ 7/2 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ “ಕಾಂಗ್ರೆಸ್ ಭವನ ಟ್ರಸ್ಟ್‌, ಬೆಂಗಳೂರು” ಇವರಿಗೆ ಮಂಜೂರು ಮಾಡಲು ನಿರ್ಣಯಿಸಲಾಯಿತು.

ರಾಯಚೂರು ಜಿಲ್ಲೆ, ಸಿರವಾರ ತಾಲ್ಲೂಕು, ಸಿರವಾರ ಸೀಮಾದ 2.2.39/*/* ರಲ್ಲಿ 10 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣದ ಉದ್ದೇಶಕ್ಕಾಗಿ “ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು” ಇವರಿಗೆ ಮಂಜೂರು ಮಾಡಲು ಸಚಿವ ಸಂಪುಟ ನಿರ್ಣಯ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸರಪಾಡಿ ಮತ್ತು ಇತರೆ 95 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯ ಕಾಮಗಾರಿಯನ್ನು ರೂ. 16.70 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಕಲಬುರಗಿ ಜಿಲ್ಲೆಯ ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ GTTC ಕೇಂದ್ರವನ್ನು ಬಹುಕೌಶಲ್ಯಾಭಿವೃದ್ಧಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (KKRDB) ಅನುದಾನದಿಂದ ಎರಡನೇ ಹಂತದಲ್ಲಿ ರೂ.66.75 ಕೋಟಿಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಹಳಿಯಾಳ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯಡಿ ನಿರ್ಮಿಸಲಾಗಿರುವ ವಿವಿಧ ಘಟಕಗಳ 5 ವರ್ಷಗಳ ನಿರ್ವಹಣೆ ಮತ್ತು ದುರಸ್ಥಿ ಕಾಮಗಾರಿಯನ್ನು ರೂ.10.60 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

“ಅಕ್ಕ ಪಡೆ” ಯೋಜನೆಯನ್ನು ಒಳಾಡಳಿತ ಇಲಾಖೆಯ ಸಹಯೋಗದೊಂದಿಗೆ ರಾಜ್ಯದ 31 ಜಿಲ್ಲೆ ಹಾಗೂ 05 ಪೊಲೀಸ್ ಆಯುಕ್ತಾಲಯಗಳಲ್ಲಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ.

“ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ಸ್ಥಾಪನೆ ಹಾಗೂ ಸಂಘದ ಉಪವಿಧಿಗಳಿಗೆ ಅನುಮೋದನೆ ನೀಡುವ ಬಗ್ಗೆ.

“ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ವಿಧೇಯಕ, 2026″ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ದುಬ್ಬನಶಶಿಯ ಮತ್ತು ಗಂಗೆಕೊಳ್ಳದ ಕಡಲ ತೀರದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಯ ರೂ.11.03 ಕೋಟಿಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲ್ಲೂಕು, ಬಾಳೆಪುಣಿ ಗ್ರಾಮದ ಸ.ನಂ. 87/4ರಲ್ಲಿ 5-00 ಎಕರೆ ಜಮೀನನ್ನು ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗ ಇವರಿಗೆ ಮಂಜೂರು ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಉತ್ತರ ತಾಲ್ಲೂಕು, ದಾಸನಪುರ ಹೋಬಳಿ, ರಾವುತ್ತನಹಳ್ಳಿ ಗ್ರಾಮದ ಸ.ನಂ. 57 ಮತ್ತು 58ರಲ್ಲಿನ ಜಮೀನನ್ನು ದಲಿತ ಹಾಗೂ ಹಿಂದುಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು, ಸಂಪಾಜೆ ಹೋಬಳಿ, ಮದೆ ಗ್ರಾಮದ ಸ.ನಂ. 98/1 ರಲ್ಲಿನ 2.00 ಅಥವಾ 3.00 ಎಕರೆ ಜಮೀನನ್ನು ಅರೆಭಾಷಿಕ ಗೌಡ ಜನಾಂಗಕ್ಕೆ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕ್ರೀಡಾ ಕೇಂದ್ರ ಸ್ಥಾಪನೆ ಉದ್ದೇಶಕ್ಕೆ “ಕೊಡಗು ಗೌಡ ಸಮಾಜ(ರಿ)” ಇವರಿಗೆ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಬಾರ್ಡ್ ಸಹಯೋಗದಲ್ಲಿ ರೂ.20 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಚಿಕ್ಕಬಳ್ಳಾಪುರ ಇಲ್ಲಿನ ನೂತನ ಆಸ್ಪತ್ರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣಗಳನ್ನು ರೂ. 40 ಕೋಟಿ ಅನುದಾನದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮಾ ಗಾಂಧಿ, ಶ್ರೀಮತಿ ಇಂದಿರಾ ಗಾಂಧಿ, ಶ್ರೀ ಜವಾಹರಲಾಲ್ ನೆಹರೂ ಮತ್ತು ಶ್ರೀ ರಾಜೀವ್ ಗಾಂಧಿ ಇವರ ಪುತ್ಥಳಿಗಳನ್ನು ಸ್ಥಾಪಿಸಲು ಸಚಿವ ಸಂಪುಟ ನಿರ್ಧರಿಸಿದೆ.

ನಬಾರ್ಡ್ ಪ್ರಾಯೋಜಿತ ಆರ್.ಐ.ಡಿ.ಎಫ್ ಟ್ರಾಂಚ್ 31ರಡಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ಇಲ್ಲಿ ಆಡಳಿತ ಭವನ ನಿರ್ಮಾಣದ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ಅನುಷ್ಠಾನಗೊಳಿಸಲು ಅನುಮೋದನೆಯಾಗಿರುವ ರೂ.70.70 ಕೋಟಿ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

11 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

11 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

11 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

11 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

12 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

12 hours ago