Mysore
17
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಧರ್ಮಸ್ಥಳಕ್ಕೆ ಭೇಟಿ ನೀಡಿದ ಯಡಿಯೂರಪ್ಪ

ದಕ್ಷಿಣ ಕನ್ನಡ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಕೂಟವನ್ನು ಭಾರೀ ಗೆಲುವಿನ ಕಡೆ ನಡೆಸಿದ ನಂತರ ಖುಷಿಯಿಂದ ಬೀಗುತ್ತಿರುವ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದಿದ್ದಾರೆ.

ಇಂದು ಬೆಳಿಗ್ಗೆ ದೇವರ ದರ್ಶನದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳ ನಂತರ ಧರ್ಮಸ್ಥಳಕ್ಕೆ ಬಂದಿದ್ದೇನೆ. ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಸಕಾಲದಲ್ಲಿ ಒಳ್ಳೆಯ ಮಳೆ ಬೆಳೆಯಾಗಲಿ. ರಾಜ್ಯದಲ್ಲಿ ಸುಭೀಕ್ಷ ತಲೆದೋರಲಿ, ಮುಂಬರುವ ದಿನಗಳಲ್ಲಿ ರೈತರಿಗೆ ಮತ್ತು ನಾಡಿನ ಎಲ್ಲಾ ಜನತೆಗೆ ಒಳಿತಾಗುವಂತೆ ಮಾಡಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿಕೊಂಡಿದ್ದೇನೆ ಎಂದರು.

 

Tags:
error: Content is protected !!