ದಕ್ಷಿಣ ಕನ್ನಡ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟವನ್ನು ಭಾರೀ ಗೆಲುವಿನ ಕಡೆ ನಡೆಸಿದ ನಂತರ ಖುಷಿಯಿಂದ ಬೀಗುತ್ತಿರುವ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದಿದ್ದಾರೆ.
ಇಂದು ಬೆಳಿಗ್ಗೆ ದೇವರ ದರ್ಶನದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳ ನಂತರ ಧರ್ಮಸ್ಥಳಕ್ಕೆ ಬಂದಿದ್ದೇನೆ. ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಸಕಾಲದಲ್ಲಿ ಒಳ್ಳೆಯ ಮಳೆ ಬೆಳೆಯಾಗಲಿ. ರಾಜ್ಯದಲ್ಲಿ ಸುಭೀಕ್ಷ ತಲೆದೋರಲಿ, ಮುಂಬರುವ ದಿನಗಳಲ್ಲಿ ರೈತರಿಗೆ ಮತ್ತು ನಾಡಿನ ಎಲ್ಲಾ ಜನತೆಗೆ ಒಳಿತಾಗುವಂತೆ ಮಾಡಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿಕೊಂಡಿದ್ದೇನೆ ಎಂದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…