Mysore
24
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ತೇಜಸ್ವಿ ಸೂರ್ಯ-ಶಿವಶ್ರೀ ರಿಸೆಪ್ಷನ್‌: ನವದಂಪತಿ ಶುಭ ಹಾರೈಸಿದ ಮಾಜಿ ಸಿಎಂ ಬಿಎಸ್‌ವೈ ಕುಟುಂಬ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್‌ ಆರತಕ್ಷತೆ ಸಂಭ್ರಮದಲ್ಲಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ನವ ದಂಪತಿಗೆ ಶುಭ ಹಾರೈಸಿದ್ದಾರೆ.

ಮಾರ್ಚ್‌.5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರಿನ ಕನಕಪುರ ರೆಸಾರ್ಟ್‌ನಲ್ಲಿ ನಡೆದಿತ್ತು. ಅವರ ವಿವಾಹಕ್ಕೆ ಕುಟುಂಬ ಸದಸ್ಯರು, ಆಪ್ತ ವಲಯದ ಸ್ನೇಹಿತರು ಹಾಗೂ ರಾಜಕೀಯ ಗಣ್ಯರು ಸಾಕ್ಷಿಯಾಗಿದ್ದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಮಾರ್ಚ್.9) ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಅವರ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿ.ವೈ.ವಿಜಯೇಂದ್ರ ಅವರು, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ನೂತನ ದಾಂಪತ್ಯಕ್ಕೆ ಅಡಿಯಿಟ್ಟ ಸಂದರ್ಭದ ಕಾರ್ಯಕ್ರಮದಲ್ಲಿ ಸಂಘಟನೆಯ ಹಿರಿಯ ಮಾರ್ಗದರ್ಶಕರೂ ಆದ ಭಾರತದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ಜೀ ಅವರೊಂದಿಗೆ ಜೊತೆಗೂಡಿ ನೂತನ ವಧು ವರರನ್ನು ಹಾರೈಸಲಾಯಿತು. ಈ ಸಂದರ್ಭದಲ್ಲಿ ಪೂಜ್ಯ ತಂದೆಯವರಾದ ಬಿ.ಎಸ್‌.ಯಡಿಯೂರಪ್ಪ ಅವರು, ಸಂಸದ ಬಿ.ವೈ.ರಾಘವೇಂದ್ರ ಅವರು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.

Tags:
error: Content is protected !!