ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಇಂದು ವಿಚಾರಣೆ ನಡೆಸಲಿದೆ.
ಈ ಕುರಿತು ಇಂದು(ಡಿ.6) ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ ಏಕ ಸದಸ್ಯ ಪೀಠವೂ ಮಧ್ಯಾಹ್ನ 2.30 ಗಂಟೆಗೆ ಅರ್ಜಿ ವಿಚಾರಣೆ ನಡೆಸಲಿದ್ದು, ಮಾಜಿ ಸಿಎಂ ಯಡಿಯೂರಪ್ಪ ಪರ ವಕೀಲ ಸಿ.ವಿ.ನಾಗೇಶ್ ಅವರು ವಾದ ಮಂಡಿಸಲಿದ್ದಾರೆ. ಪ್ರಕರಣವನ್ನು ದಾಖಲಿಸಿರುವ ಸಿಐಡಿ ತನಿಖಾ ಸಂಸ್ಥೆ ಪರವಾಗಿ ರವಿಮರ್ಮ ಕುಮಾರ್ ಹಾಜರಾಗಲಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ನ ಏಕ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅನ್ವಯ ಇಂದು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಲಿದ್ದಾರೆ.
ಏನಿದು ಪ್ರಕರಣ?
2024ರ ಮಾರ್ಚ್ ತಿಂಗಳಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಲಾಗಿತ್ತು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…