Mysore
24
haze

Social Media

ಭಾನುವಾರ, 29 ಮಾರ್ಚ್ 2026
Light
Dark

ರಾಜ್ಯ ಸರ್ಕಾರದಿಂದ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ: ಬಿ.ಎಸ್‌.ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಮಾಡಿ, ರಾಜ್ಯದ ಜನತೆಗೆ ಹೊರೆ ಮಾಡಿದೆ. ಹಾಗಾಗಿ ಸರ್ಕಾರ ತಕ್ಷಣ ಕೂಡಲೇ ಬೆಲೆ ಹಿಂಪಡೆಯಬೇಕೆಂದು ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.1) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ರಾಜ್ಯ ಸರ್ಕಾರ ಮುಸ್ಲಿಮರಿಗೆ ಶೇ.4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ ಬೆಲೆ ಒಂದು ವರ್ಷದ ಅವಧಿಯಲ್ಲಿ 9 ರೂಪಾಯಿ ಹೆಚ್ಚಳ ಮಾಡಿದೆ ಎಂದು ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ನಿರಂತರ ಬೆಲೆ ಏರಿಕೆಯ ನೀತಿಯಿಂದ ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ. ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾಲು, ವಿದ್ಯುತ್‌, ಮೆಟ್ರೋ ಹಾಗೂ ಬಸ್‌ ಟಿಕೆಟ್‌ ದರ ಸೇರಿದಂತೆ ಅಗತ್ಯ ವಸ್ತುಗಳ ಮೇಲೆ ನಿರಂತರವಾಗಿ ಬೆಲೆ ಏರಿಸುತ್ತಿದೆ. ಈ ಎಲ್ಲಾ ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ನಾಳೆ(ಏಪ್ರಿಲ್‌.2) ಬೆಳಿಗ್ಗೆಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು. ಈ ಧರಣಿಯಲ್ಲಿ ನಾನು ಸಹ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.

Tags:
error: Content is protected !!